ಟರ್ಕಿಯಲ್ಲಿ ರಕ್ಷಣಾ ಕಾರ್ಯಾಚರಣೆ ಅಂತ್ಯ: ಮರಳಿ ತವರಿಗೆ ಬಂದ NDRF ತಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕಳೆದ ಕೆಲವು ದಿನಗಳ ಹಿಂದೆ ಸರಣಿ ಭೂಕಂಪದಿಂದ ತತ್ತರಿಸಿದ್ದ ಟರ್ಕಿಗೆ ನೆರವು ನೀಡಲು ತೆರಳಿದ್ದ ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF)ಯ ಕೊನೆ ತಂಡ ಭಾನುವಾರ ಮನೆಗೆ ಮರಳಿದೆ.

ಟರ್ಕಿ ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರೆಸಿಡೆನ್ಸಿ(AFAD) ರಕ್ಷಣಾ ಕಾರ್ಯಾಚರಣೆ ಅಂತ್ಯಗೊಳಿಸುವುದಾಗಿ ಘೋಷಿಸಿದ ಬಳಿಕ ಆಪರೇಷನ್ ದೋಸ್ತ್ ಅಡಿಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ತೆರಳಿದ್ದ ಭಾರತದ ಎನ್ ಡಿಆರ್ ಆಫ್ ತಂಡ ಇಂದು ಭಾರತಕ್ಕೆ ಮರಳಿದೆ.

ಟರ್ಕಿ ಗೆ ಭಾರತದಿಂದ ಆಪರೇಷನ್ ದೋಸ್ತ್ ಅಡಿಯಲ್ಲಿ 151 NDR ಸಿಬ್ಬಂದಿ ಮತ್ತು ಶ್ವಾನ ದಳ ಒಳಗೊಂಡ ಮೂರು ತಂಡಗಳು ತೆರಳಿದ್ದವು.

ಇದೀಗ ಟರ್ಕಿ ಮತ್ತು ಸಿರಿಯಾದಲ್ಲಿ ಭೀಕರ ಭೂಕಂಪ ಸಂಭವಿಸಿದ ಸುಮಾರು ಎರಡು ವಾರಗಳ ನಂತರ ಹೆಚ್ಚಿನ ಪ್ರಾಂತ್ಯಗಳಲ್ಲಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆ ಅಂತ್ಯಗೊಂಡಿವೆ ಎಂದು ಟರ್ಕಿಶ್ ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರೆಸಿಡೆನ್ಸಿ (ಎಎಫ್ಎಡಿ) ಶನಿವಾರ ಹೇಳಿರುವುದಾಗಿ ಅಲ್ ಜಜೀರಾ ವರದಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!