ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶೀಘ್ರದಲ್ಲೇ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ನಡೆಯುತ್ತಿರುವ ಸಂಘರ್ಷ ಕೊನೆಗೊಳ್ಳಲಿದೆಯೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದಾರೆ.
ಮಲೇಷ್ಯಾದಲ್ಲಿ ನಡೆದ ಕಾಂಬೋಡಿಯಾ-ಥೈಲ್ಯಾಂಡ್ ಶಾಂತಿ ಒಪ್ಪಂದದ ಸಹಿ ಸಮಾರಂಭದಲ್ಲಿ ಮಾತನಾಡಿದ ಟ್ರಂಪ್, ನನ್ನ ಆಡಳಿತವು ಕೇವಲ ಎಂಟು ತಿಂಗಳಲ್ಲಿ ಎಂಟು ಯುದ್ಧಗಳನ್ನು ಕೊನೆಗೊಳಿಸಿದೆ. ನಾವು ಪ್ರತಿ ತಿಂಗಳು ಒಂದು ಯುದ್ಧವನ್ನು ಕೊನೆಗೊಳಿಸುತ್ತಿದ್ದೇವೆ. ಈಗ ಒಂದೇ ಒಂದು ಉಳಿದಿದೆ ಅದು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ವಿವಾದ. ಆದರೆ ನಾನು ಅದನ್ನು ಬೇಗನೆ ಪರಿಹರಿಸುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಘರ್ಷಣೆಗಳು ಇತ್ತೀಚೆಗೆ ಪ್ರಾರಂಭವಾಗಿವೆ, ಆದರೆ ಅವರು ಎರಡೂ ದೇಶಗಳ ನಾಯಕರನ್ನು ಪರಸ್ಪರ ಮಾತುಕತೆ ನಡೆಸಿದ್ದಾರೆ. ಈ ವಿಷಯವು ಶೀಘ್ರದಲ್ಲೇ ಬಗೆಹರಿಯುತ್ತದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ಇತ್ತೀಚೆಗೆ ಪಾಕಿಸ್ತಾನ-ಅಫ್ಘಾನಿಸ್ತಾನದ ಉದ್ವಿಗ್ನತೆ ಹೆಚ್ಚಳವಾಗಿದ್ದು, ಬ್ರಿಟಿಷ್ ಆಳ್ವಿಕೆಯಲ್ಲಿ ಗುರುತಿಸಲಾದ 2,611 ಕಿಲೋಮೀಟರ್ ಗಡಿಯಾದ ಡುರಾಂಡ್ ರೇಖೆಯ ಉದ್ದಕ್ಕೂ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ಘರ್ಷಣೆಗಳು ನಡೆದಿವೆ.

