ರಾಹುಲ್ ಗಾಂಧಿಗೆ ಮುಗಿಯದ ಸಂಕಷ್ಟ: Bharat Jodo Yatra ವಿರುದ್ಧ ಹೈಕೋರ್ಟ್‌ಗೆ ಅರ್ಜಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ರಾಹುಲ್ ಗಾಂಧಿ ಮುಂದಾಳತ್ವದಲ್ಲಿ ಕೇರಳದಲ್ಲಿ ಭಾರಿ ಜನ ಬೆಂಬಲದೊಂದಿಗೆ ಭಾರತ್ ಜೋಡೋ ಯಾತ್ರೆ ಸಂಚರಿಸುತ್ತಿದೆ. ಇದರ ನಡುವೆ ಯಾತ್ರೆ ಘೋಷಿಸಿದ ದಿನದಿಂದ ಒಂದಲ್ಲ ಒಂದು ಸಮಸ್ಯೆ, ವಿಘ್ನ ಎದುರಾಗುತ್ತಿದೆ.

ಇದೀಗ ಕೇರಳದಲ್ಲಿ ಭಾರತ್ ಜೋಡೋ ಯಾತ್ರೆ ವಿರುದ್ಧ ವಕೀಲ ಕೆ ವಿಜಯನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಹುಲ್ ಗಾಂಧಿ ಹಾಗೂ ಭಾರತ್ ಜೋಡೋ ಯಾತ್ರೆಯಿಂದ ಇಡೀ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಸಂಭವಿಸುತ್ತಿದೆ. ಜನರು ಗಂಟೆ ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ಇದರಿಂದ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ಸಾಗುವ ದಾರಿಯಲ್ಲಿ ಶಿಸ್ತು ಪಾಲಿಸುವುದು ಅಗತ್ಯ. ಭಾರತ್ ಜೋಡೋ ಯಾತ್ರೆ ಸಂಪೂರ್ಣ ದಾರಿಯನ್ನು ಆವರಿಸಿಕೊಂಡು ಸಾಗುತ್ತಿದೆ. ಇದರಿಂದ ಟ್ರಾಫಿಕ್ ಜಾಮ್ ಸಂಭವಿಸುತ್ತಿದೆ. ಇದರ ಬದಲು ಕನಿಷ್ಠ ಒಂದು ಪಥದಲ್ಲಿ ಯಾತ್ರೆ ಸಂಚರಿಸಿದರೆ ಇನ್ನೊಂದು ಪಥದಲ್ಲಿ ವಾಹನ ಸಂಚಾರ ಮಾಡಲು ಸಾಧ್ಯವಾಗಲಿದೆ. ಆದರೆ ರಾಹುಲ್ ಗಾಂಧಿ ಹಾಗೂ ಭಾರತ್ ಜೋಡೋ ಯಾತ್ರೆಬೆಂಬಲಿಗರು ಇದ್ಯಾವುದನ್ನು ಗಮನಿಸಿದ ಯಾತ್ರೆ ನಡೆಸುತ್ತಿದ್ದಾರೆ. ಸಾರ್ವಜನಿಕರಿಗೆ ತೀವ್ರ ಸಮಸ್ಯೆ ತಂದಿಟ್ಟಿದ್ದಾರೆ. ಹೈಕೋರ್ಟ್ ತಕ್ಷಣವೇ ಈ ಕುರಿತು ನಿರ್ದೇಶನ ನೀಡಬೇಕು ಎಂದು ಕೆ ವಿಜಿಯನ್ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!