ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಕೇರಳ ಗಡಿ ಭಾಗದ ಹಲವು ಪ್ರದೇಶಗಳನ್ನು ನರಕಸದೃಶವಾಗಿಸಿದ ಎಂಡೋಸಲ್ಫಾನ್‌ಗೆ ಮತ್ತೊಂದು ಜೀವ ಬಲಿಯಾಗಿದೆ.
ಎಂಡೋಸಲ್ಫಾನ್ ದುಷ್ಪರಿಣಾಮಕ್ಕೆ ಸಿಲುಕಿ ಬಳಲುತ್ತಿದ್ದ ಕಾಸರಗೋಡು ಜಿಲ್ಲೆ ಬೆಳ್ಳೂರಿನ 12 ವರ್ಷ ಪ್ರಾಯದ ಪುಟಾಣಿ ಕೃಶಿಕ ಇಹಲೋಕ ತ್ಯಜಿಸಿದ್ದಾರೆ.
ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈಕೆಗೆ ಯಾವುದೇ ಚಿಕಿತ್ಸೆಗಳು ಫಲಕಾರಿಯಾಗಲಿಲ್ಲ. ಕೃಶಿಕ ಅವರ ಮೃತದೇಹವನ್ನು ಈಗ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.