ರಾಜ್ಯದ ಜನತೆ ಸಿಹಿ ಸುದ್ದಿ ನೀಡಿದ ಇಂಧನ ಸಚಿವ ಸುನೀಲ್ ಕುಮಾರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇನ್ಮುಂದೆ ವಿದ್ಯುತ್ ಸಂಪರ್ಕ ಪಡೆಯಲು ಒಸಿ ಕಡ್ಡಾಯವಲ್ಲ . ಈ ಬಗ್ಗೆ ಇಂಧನ ಸಚಿವ ವಿ. ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ.

ವಿದ್ಯುತ್ ಸಂಪರ್ಕ ಪಡೆಯಲು ಉದ್ಯಮ, ವಾಣಿಜ್ಯ ಮಳಿಗೆ, ವಾಸದ ಮನೆಗೆ ಒಸಿ ಅಗತ್ಯವಿತ್ತು. ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳಿಂದ ಒಸಿ ಪಡೆಯಬೇಕಾಗಿತ್ತು. ಒಸಿ ಇದ್ದವರಿಗೆ ಮಾತ್ರ ವಿದ್ಯುತ್ ಸಂಪರ್ಕ ನೀಡಲಾಗುತ್ತಿತ್ತು. ಇದೀಗ ಸಿಎಂ ಅನುಮೋದನೆಯೊಂದಿಗೆ ಸರ್ಕಾರ ಮನವಿ ಸಲ್ಲಿಸಿದ್ದು, ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗ ನಿಯಮ ತೆಗೆದುಹಾಕಿದೆ.

ಈ ಬಗ್ಗೆ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಆಯೋಗ ಹೊರಡಿಸಿದ ಆದೇಶ ಈಗ ರಾಜ್ಯಪತ್ರದ ಮೂಲಕ ಅಧಿಕೃತಗೊಂಡಿದೆ. ಇನ್ನು ಮುಂದೆ ಗುರುತಿನ ಚೀಟಿ ಹಾಗೂ ಸ್ವತ್ತಿನ ಹಕ್ಕುಪತ್ರ ಇದ್ದರೆ ವಿದ್ಯುತ್ ಸಂಪರ್ಕ ಪಡೆಯಬಹುದಾಗಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಸುನೀಲ್ ಕುಮಾರ್, ಕಟ್ಟಡಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ನಿರಾಕ್ಷೇಪಣಾ ಪತ್ರ (ಓಸಿ) ಇಲ್ಲ ಎಂಬ ಕಾರಣಕ್ಕೆ ವಿದ್ಯುತ್ ಸಂಪರ್ಕ ನಿರಾಕರಣೆ ಇನ್ನು ಸಾಧ್ಯವಿಲ್ಲ. ಕಾಂಗ್ರೆಸ್ ಕಾಲದ ಈ ‘ಕತ್ತಲೆಭಾಗ್ಯದ’ ನಿಯಮವನ್ನು ಕೊನೆಗೂ ನಿವಾರಿಸಿದ್ದೇವೆ. ನಿಯಮ ಬದಲಾಯಿಸಿ KREC ಹೊರಡಿಸಿದ್ದ ಆದೇಶ ಇಂದಿನಿಂದಲೇ ರಾಜ್ಯಪತ್ರದ ಮೂಲಕ ಜಾರಿಗೆ ಬರುತ್ತಿದೆ. ಸರ್ವರಿಗೂ ಬೆಳಕು ಎಂಬ ನಮ್ಮ ಧ್ಯೇಯವಾಕ್ಯಕ್ಕೆ ಇನ್ನು ಯಾವುದೇ ಅಡ್ಡಿ ಇಲ್ಲ ಎಂದು ಆದೇಶದ ಮಾಹಿತಿ ತಿಳಿಸಿದ್ದಾರೆ.

ಇದು ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 5 ಲಕ್ಷ ಕುಟುಂಬಗಳಿಗೆ ಇದು ಅನುಕೂಲವಾಗಲಿದೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಈ ಕತ್ತಲೆ ಭಾಗ್ಯದ ಕಾನೂನನ್ನು ಜಾರಿಗೆ ಬಂದಿದ್ದು, ನಮ್ಮ ಸರಕಾರ ಅದನ್ನು ಬದಲಾಯಿಸಿದೆ. ಎಲ್ಲರ ಮನೆಯಲ್ಲೂ ಬೆಳಕು ಮೂಡಲಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!