ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತನಿಖಾ ಸಂಸ್ಥೆಯ ವಿರುದ್ಧ ಕಿಡಿಕಾರಿದ್ದು, ಬೀದಿನಾಯಿಗಿಂತ ಹೆಚ್ಚಾಗಿ ಜಾರಿ ನಿರ್ದೇಶನಾಲದ ಅಧಿಕಾರಿಗಳೇ ತಿರುಗಾಡ್ತಿದ್ದಾರೆ ಎಂದು ಹೇಳಿದ್ದಾರೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ರಾಜಸ್ಥಾನದಲ್ಲಿ ಕೆಲವು ಕಾಂಗ್ರೆಸ್ ನಾಯಕರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ ಒಂದು ದಿನದ ಬಳಿಕ ರಿಯಾಕ್ಷನ್ ನೀಡಿದ್ದಾರೆ.
ನಾಯಿಗಳಿಗಿಂತಲೂ ಹೆಚ್ಚಾಗಿ ಜಾರಿ ನಿರ್ದೇಶನಾಲಯವು ದೇಶದಲ್ಲಿ ಓಡಾಡುತ್ತಿದೆಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸರ್ಕಾರ ಅದರಲ್ಲೂ ರಾಜಸ್ಥಾನ ಸರ್ಕಾರದ ಗ್ಯಾರಂಟಿ ಮಾಡೆಲ್‌ಅನ್ನು ಅನುಸರಿಸುತ್ತಿದ್ದಾರೆ. ನಾನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಮುಖ್ಯಸ್ಥರಿಂದ ಸಮಯ ಕೋರಿದೆ, ಆದರೆ ಈಗ ಇವು ರಾಜಕೀಯ ಅಸ್ತ್ರವಾಗಿ ಮಾರ್ಪಟ್ಟಿವೆ. ಮೋದಿ ಅವರಿಗೆ ಕೌಂಟ್‌ಡೌನ್ ಪ್ರಾರಂಭವಾಗಿದೆ ಎನ್ನುವುದು ತಿಳಿದಿಲ್ಲ ಅವರು ಈಗ ನಮ್ಮ ‘ಗ್ಯಾರಂಟಿ ಮಾದರಿ’ಯನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.