ಲ್ಯಾಂಡಿಂಗ್ ವೇಳೆ ಎಂಜಿನ್ ವೈಫಲ್ಯ: ಕೂದಲೆಳೆಯ ಅಂತರದಲ್ಲಿ ತಪ್ಪಿದ ವಿಮಾನ ದುರಂತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕಾದ ಡೆವೊನ್ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಭೀಕರ ವಿಮಾನ ಅಪಘಾತ ಕೇವಲ ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬೋಯಿಂಗ್ ವಿಮಾನವೊಂದು ಲ್ಯಾಂಡಿಂಗ್ ವೇಳೆ ಎಂಜಿನ್ ವೈಫಲ್ಯಕ್ಕೆ ಒಳಗಾಗಿ, ಎಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿತು. ಈ ವಿಮಾನದಲ್ಲಿ ಒಟ್ಟು 179 ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಅನಾಹುತವಾಗದೆ ಎಲ್ಲರನ್ನೂ ಸುರಕ್ಷಿತವಾಗಿ ಹೊರತೆಗೆಯಲಾಗಿದೆ.

ಘಟನೆಯ ತಕ್ಷಣವೇ ವಿಮಾನ ನಿಲ್ದಾಣದ ಅಗ್ನಿಶಾಮಕ ಸಿಬ್ಬಂದಿ ಹಾಗೂ ವಿಮಾನ ಸಿಬ್ಬಂದಿಯು ತುರ್ತು ನಿರ್ಗಮನ ದ್ವಾರಗಳಿಂದ ಪ್ರಯಾಣಿಕರನ್ನು ವಿಮಾನದ ಹೊರಗೆ ಸುರಕ್ಷಿತವಾಗಿ ಸ್ಥಳಾಂತರಿಸಿದರು. ಈ ಸಂದರ್ಭದಲ್ಲಿ ಒಬ್ಬ ಪ್ರಯಾಣಿಕ ಸಣ್ಣ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದ ಇಂಜಿನ್ ಭಾಗದಿಂದ ಹೊಗೆ ಹೊರಬರುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಘಟನೆಯ ತೀವ್ರತೆಯನ್ನು ಎತ್ತಿ ತೋರಿಸುತ್ತಿವೆ.

ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ಈ ಘಟನೆ ಸಂಬಂಧ ತನಿಖೆ ಆರಂಭಿಸಿದೆ. ತಜ್ಞರ ತಂಡ ಬೋಯಿಂಗ್ ಎಂಜಿನ್ ಭಾಗಗಳನ್ನು ಪರೀಕ್ಷಿಸಿ ಎಂಜಿನ್ ವೈಫಲ್ಯಕ್ಕೆ ಕಾರಣವಾದ ತಾಂತ್ರಿಕ ದೋಷವನ್ನು ಪತ್ತೆಹಚ್ಚಲು ಕಾರ್ಯನಿರ್ವಹಿಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Logged in as Ashika HD. Log out?

Please enter your comment!

error: Content is protected !!