September 27, 2026
Sunday, September 27, 2026
spot_img

ಟೇಕ್ ಆಫ್ ವೇಳೆ ಎಂಜಿನ್‌ನಲ್ಲಿ ಹೊಗೆ: ಪೈಲಟ್‌ಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್‌ಆಫ್‌ಗೆ ಸಜ್ಜಾಗಿದ್ದ ವಿಮಾನದಲ್ಲಿ ಕೊನೆಯ ಕ್ಷಣದಲ್ಲಿ ತಾಂತ್ರಿಕ ದೋಷ ಪತ್ತೆಯಾಗಿದ್ದು, ಭಾರಿ ಅನಾಹುತವೊಂದು ತಪ್ಪಿದೆ.

ಜ್ಯೂರಿಚ್‌ಗೆ ಹೊರಡಬೇಕಿದ್ದ ಸ್ವಿಸ್ ಏರ್‌ಲೈನ್ಸ್ ವಿಮಾನದಲ್ಲಿ ಎಂಜಿನ್ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಪೈಲಟ್‌ಗಳು ಹಾರಾಟವನ್ನು ರದ್ದುಗೊಳಿಸಿ ವಿಮಾನವನ್ನು ರನ್‌ವೇಯಲ್ಲೇ ನಿಲ್ಲಿಸಿದರು. ಈ ತುರ್ತು ನಿರ್ಧಾರದಿಂದ ನೂರಾರು ಪ್ರಯಾಣಿಕರ ಜೀವ ರಕ್ಷಿಸಲಾಗಿದೆ.

ವಿಮಾನ ವೇಗ ಪಡೆಯುತ್ತಿದ್ದಾಗ ಎಂಜಿನ್‌ನಲ್ಲಿ ಅಸಹಜ ಲಕ್ಷಣಗಳು ಗೋಚರಿಸಿದ್ದು, ಕೆಲವೇ ಕ್ಷಣಗಳಲ್ಲಿ ಹೊಗೆ ಕಾಣಿಸಿಕೊಂಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಪೈಲಟ್‌ಗಳು ಯಾವುದೇ ವಿಳಂಬ ಮಾಡದೇ ಟೇಕ್‌ಆಫ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದರು. ಬಳಿಕ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆದರು.

ಇದನ್ನೂ ಓದಿ:

ತುರ್ತು ಸ್ಥಳಾಂತರದ ವೇಳೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಚಿಕಿತ್ಸೆ ನೀಡಲಾಗಿದೆ. ಯಾರಿಗೂ ಗಂಭೀರ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಪ್ರಸ್ತುತ ವಿಮಾನವನ್ನು ತಾಂತ್ರಿಕ ತಂಡಗಳು ಪರಿಶೀಲಿಸುತ್ತಿದ್ದು, ಎಂಜಿನ್ ದೋಷದ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ಈ ನಡುವೆ ಸಂಕಷ್ಟಕ್ಕೀಡಾದ ಪ್ರಯಾಣಿಕರಿಗೆ ಪರ್ಯಾಯ ವಿಮಾನ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲು ವಿಮಾನಯಾನ ಸಂಸ್ಥೆ ಮುಂದಾಗಿದೆ.

Must Read