ರಾಜ್ಯದಲ್ಲಿ ನಾಳೆಯಿಂದ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು ಪುನರಾರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಜಾಬ್ ವಿವಾದ ಹಿನ್ನೆಲೆ ಬಂದ್ ಆಗಿದ್ದ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳನ್ನು ನಾಳೆಯಿಂದ ಆರಂಭಿಸೋದಾಗಿ ರಾಜ್ಯ ಸರ್ಕಾರ ಹೇಳಿತ್ತು. ಇದೀಗ ನಾಳೆಯಿಂದ ಪಿಯು, ಪದವಿ ಜೊತೆಗೆ ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳನ್ನು ಆರಂಭಿಸುವುದಾಗಿ ತಿಳಿಸಿದೆ.
ಈ ಕುರಿತಂತೆ ತಾಂತ್ರಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ದಿನಾಂಕ 15-02-2022ರಲ್ಲಿ ಸೂಚಿಸಿದಂತೆ ದಿನಾಂಕ 11-02-2022ರ ಸುತ್ತೋಲೆಯನ್ನು ಮಾರ್ಪಡಿಸಿ, ದಿನಾಂಕ 16-02-2022ರಂದು ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳ ಆರಂಭಿಸುವುದಾಗಿ ತಿಳಿಸಿದೆ.
ಈ ಮೂಲಕ ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವಂತ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳನ್ನು ದಿನಾಂಕ 16-02-2022ರಿಂದ ಪುನರ್ ಪ್ರಾರಂಭಿಸಲು ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!