ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಕೇಸ್‌: ರಾಜ್ಯದ 18 ಕಡೆ ಇ.ಡಿ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಂಜಿನಿಯರಿಂಗ್ ಅಕ್ರಮ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಬಿಎಂಎಸ್​​ ಕಾಲೇಜು ಸೇರಿ ಕರ್ನಾಟಕದ 18 ಕಡೆ ಇ.ಡಿ ದಾಳಿ ಮಾಡಿದೆ.

ಬೆಂಗಳೂರಿನ ಕೆಲವು ಖಾಸಗಿ ಕಾಲೇಜುಗಳಲ್ಲಿ ನಡೆದ ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಆಕಾಶ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಮತ್ತು ನ್ಯೂ ಹೊರೈಜನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಂತಹ ಕಾಲೇಜುಗಳ ಆವರಣಗಳು, ಬಿಎಂಎಸ್‌ನ ಟ್ರಸ್ಟಿಗಳು ಮತ್ತು ಅವರ ಪ್ರಮುಖ ಸಹಚರರು ಮತ್ತು ಕೆಲವು ಶಿಕ್ಷಣ ಸಲಹೆಗಾರರು ಮತ್ತು ಏಜೆಂಟ್‌ಗಳಿಗೆ ಸಂಬಂಧಿಸಿದ ಸ್ಥಳಗಳಳ್ಲಿ ಶೋಧಕಾರ್ಯ ನಡೆಸಿದ್ದಾರೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಂದ್ರದ ತನಿಖಾ ಸಂಸ್ಥೆಯ ಬೆಂಗಳೂರು ವಲಯ ಘಟಕವು ತನಿಖೆಯನ್ನು ನಡೆಸುತ್ತಿದೆ ಎಂದು ಅವರು ಹೇಳಿದರು.

ಎಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸಿಇಟಿ ಫಲಿತಾಂಶದ ಅನ್ವಯ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದಂತೆ ಕೆಲ ಕಾಲೇಜುಗಳ ಎಂಜಿನಿಯರಿಂಗ್ ಸೀಟುಗಳನ್ನು ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!