July 14, 2026
Tuesday, July 14, 2026
spot_img

ಅಪ್ಪ ಅಮ್ಮನಿಗಾಗಿ ಭಾವುಕ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್‌ ವಿದ್ಯಾರ್ಥಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಪ್ಪ ಅಮ್ಮನಿಗಾಗಿ ಭಾವುಕ ಪತ್ರವೊಂದನ್ನು ಬರೆದಿಟ್ಟು ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ದಾವಣಗೆರೆ ಜಿಲ್ಲೆಯ ದೊಣ್ಣೆಹಳ್ಳಿ ಗ್ರಾಮದ ವೆಂಕಟೇಶ್‌ ಮೃತರು. ಈತ ತುಮಕೂರಿನ ಎಸ್‌ಐಟಿ ಕಾಲೇಜಿನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದ.

ಉಪ್ಪಾರಹಳ್ಳಿಯಲ್ಲಿರುವ ಬಿಸಿಎಂ ಹಾಸ್ಟೆಲ್‌ನಲ್ಲಿ ತಂಗಿದ್ದ ವೆಂಕಟೇಶ್‌ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮರುದಿನ ಸ್ನೇಹಿತರು ರೂಮಿಗೆ ಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ವಿದ್ಯಾರ್ಥಿ ವೆಂಕಟೇಶ್ ಆತ್ಮಹತ್ಯೆಗೆ ನಿಖರವಾದ ಕಾರಣವೇನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಆದರೆ, ಸಾವಿಗೂ ಮುನ್ನ ಅವರು ತಮ್ಮ ಹೆತ್ತ ಪೋಷಕರು ಹಾಗೂ ಕುಟುಂಬಸ್ಥರನ್ನು ಉದ್ದೇಶಿಸಿ ಭಾವನಾತ್ಮಕ ಡೆತ್ ನೋಟ್ ಒಂದನ್ನು ಬರೆದಿಟ್ಟಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !