ಹೊಸದಿಗಂತ ವರದಿ ಹಾವೇರಿ:
ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ವರದಿಯಾಗಿದೆ.
ಮೃತ ವಿದ್ಯಾರ್ಥಿಯನ್ನು ಹಾವೇರಿ ಎಂಜಿನಿಯರಿಂಗ್ ಕಾಲೇಜಿನ 4ನೇ ಸೆಮಿಸ್ಟರ್ ಅಧ್ಯಯನ ಮಾಡುತ್ತಿದ್ದ ಉಲ್ಲಾಸ (21) ಎಂದು ಗುರುತಿಸಲಾಗಿದೆ.
ಈತ ಸೆಮಿಸ್ಟರ್ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದು ಇದರಿಂದ ಜಿಗುಪ್ಸೆಗೊಂಡಿದ್ದ ಎನ್ನಲಾಗಿದೆ. ಆದಾಗ್ಯೂ ಇತರೆ ಕಾರಣಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನು ವಿದ್ಯಾರ್ಥಿಯ ಶವವನ್ನು ಪೋಲೀಸರು ಕಸದ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಇದು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಕಣ್ಣು ಕೆಂಪಾಗಿಸಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.