ರಸ್ತೆ ಅಪಘಾತಗಳಿಗೆ ಚಾಲಕರು ಅಲ್ಲ, ಎಂಜಿನಿಯರ್‌ಗಳು ಕಾರಣ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಹೊಸದಿಗಂತ ವರದಿ,ರಾಯಚೂರು :

ದೇಶದಲ್ಲಿ ಯುದ್ಧ, ಭಯೋತ್ಪಾದನೆ ಮತ್ತು ನಕ್ಸಲೀಯರ ವಿಧ್ವಂಸಕ ಕೃತ್ಯದಿಂದ ಸಂಭವಿಸುವ ಸಾವುಗಳಿಗಿಂತಲೂ ರಸ್ತೆ ಅಪಘಾತಗಳಲ್ಲಿ ಮೃತಪಡುವವರ ಸಂಖ್ಯೆ ಹೆಚ್ಚಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಎಫ್‌ಐಸಿಸಿಐನಿಂದ ಬುಧವಾರ ಹಮ್ಮಿಕೊಂಡಿದ್ದ 6ನೇ ವರ್ಷದ ರಸ್ತೆ ಸುರಕ್ಷತೆ ಪ್ರಶಸ್ತಿ ಪ್ರದಾನ ಮತ್ತು ಸಮಾವೇಶದಲ್ಲಿ ಮಾತನಾಡಿದ ಅವರು, ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಅವೈಜ್ಞಾನಿಕವಾಗಿ ಸಿದ್ಧಪಡಿಸುವ ವಿಸ್ತೃತ ಯೋಜನಾ ವರದಿಗಳಿಂದ ಹೆದ್ದಾರಿಗಳಲ್ಲಿ ಬ್ಲಾಕ್‌ ಸ್ಪಾಟ್‌ (ಅಪಘಾತ ವಲಯ) ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಅಪಘಾತಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ ಎಂದರು.

ವಾರ್ಷಿಕವಾಗಿ ದೇಶದಲ್ಲಿ 5 ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, 1.5 ಲಕ್ಷ ಜನರು ಮೃತಪಡುತ್ತಿದ್ದಾರೆ. 3 ಲಕ್ಷ ಜನರು ಗಾಯಗೊಳ್ಳುತ್ತಿದ್ದಾರೆ. ಇದರಿಂದ ದೇಶದ ಜಿಡಿಪಿಗೆ ಶೇ 3ರಷ್ಟು ನಷ್ಟವಾಗುತ್ತಿದೆ ಎಂದು ಹೇಳಿದರು.

ಪ್ರತಿ ರಸ್ತೆ ಅಪಘಾತಕ್ಕೂ ಚಾಲಕರನ್ನು ಹರಕೆಯು ಕುರಿ ಮಾಡುತ್ತೇವೆ. ಈ ಬಗ್ಗೆ ನಾನು ಸೂಕ್ಷ್ಮವಾಗಿ ಗಮನಿಸಿದ್ದು, ರಸ್ತೆ ಎಂಜಿನಿಯರ್‌ಗಳ ತ‍ಪ್ಪು ಎದ್ದು ಕಾಣುತ್ತದೆ ಎಂದು ಹೇಳಿದರು.

ಸುರಕ್ಷತೆಗೆ ಸಂಬಂಧಿಸಿದಂತೆ ಎಲ್ಲಾ ಹೆದ್ದಾರಿಗಳ ಬಗ್ಗೆ ಪರಿಶೀಲನೆ ನಡೆಸುವ ಅಗತ್ಯವಿದೆ. ರಸ್ತೆ ಸಂಚಾರ ನಿಯಮ ಪಾಲಿಸುವ ಮೂಲಕ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!