ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಲಿದ್ದೇನೆ ಎಂದು ಹೇಳಿದ್ದಾರೆ. ಈ ಮೂಲಕ ಬೆನ್ ಸ್ಟೋಕ್ಸ್ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಆಲ್ ರೌಂಡರ್ ತಮ್ಮ ಟ್ವಿಟರ್ ಖಾತೆಯಲ್ಲಿ ಈ ಘೋಷಣೆಯನ್ನು ಅವರು ಮಾಡಿದ್ದು, ಸುದೀರ್ಘ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ.
‘ನಾನು ಮಂಗಳವಾರ ಡರ್ಹಾಮ್ನಲ್ಲಿ ಏಕದಿನ ಕ್ರಿಕೇಟ್ ನಲ್ಲಿ ಇಂಗ್ಲೆಂಡ್ ಪರ ನನ್ನ ಕೊನೆಯ ಪಂದ್ಯವನ್ನು ಆಡಲಿದ್ದೇನೆ. ನಾನು ಈ ಸ್ವರೂಪದಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಇದು ನಂಬಲಾಗದಷ್ಟು ಕಠಿಣ ನಿರ್ಧಾರವಾಗಿದೆ. ಇಂಗ್ಲೆಂಡ್ ಗಾಗಿ ನನ್ನ ಸಹ ಆಟಗಾರರೊಂದಿಗೆ ಆಡುವ ಪ್ರತಿ ನಿಮಿಷವನ್ನು ನಾನು ಪ್ರೀತಿಸುತ್ತೇನೆ. ನಾವು ದಾರಿಯಲ್ಲಿ ನಂಬಲಸಾಧ್ಯವಾದ ಪ್ರಯಾಣವನ್ನು ಹೊಂದಿದ್ದೇವೆ,’ ಎಂದು ಸ್ಟೋಕ್ಸ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸ್ಟೋಕ್ಸ್ ಇಂಗ್ಲೆಂಡ್ ಪರ 104 ಏಕದಿನ ಪಂದ್ಯಗಳನ್ನಾಡಿದ್ದು, 39.44ರ ಸರಾಸರಿಯಲ್ಲಿ 2,919 ರನ್ ಗಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!