ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ಬ್ಯಾಟರ್ ಹ್ಯಾರಿ ಬ್ರೂಕ್ ಈ ಬಾರಿಯ ಐಪಿಎಲ್ ನಿಂದ ಹಿಂದೆ ಸರಿದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ಗಾಗಿ ಹೆಚ್ಚಿನ ಸಿದ್ಧತೆ ಮಾಡಿಕೊಳ್ಳುವ ಸಲುವಾಗಿ ಐಪಿಎಲ್ಗೆ ಅಲಭ್ಯರಾಗುವುದಾಗಿ ತಿಳಿಸಿದ್ದಾರೆ.
ಆದರೆ ಇದೀಗ ಹ್ಯಾರಿ ಬ್ರೂಕ್ ಅವರ ಈ ನಿರ್ಧಾರ ಅವರಿಗೆ ಮುಳುವಾಗಲಿದ್ದು, ರೆ ಇಂಡಿಯನ್ ಪ್ರೀಮಿಯರ್ ಲೀಗ್ನ ಹೊಸ ನಿಯಮದ ಪ್ರಕಾರ, ಐಪಿಎಲ್ ಮೆಗಾ ಹರಾಜಿನ ಮೂಲಕ ಆಯ್ಕೆಯಾದ ಆಟಗಾರರು ಟೂರ್ನಿಯಿಂದ ಹಿಂದೆ ಸರಿದರೆ ಅಂತಹ ಆಟಗಾರರ ಮೇಲೆ 2 ವರ್ಷಗಳ ನಿಷೇಧ ಹೇರಲಾಗುತ್ತದೆ.
ಅದರಂತೆ ಈ ಬಾರಿಯ ಐಪಿಎಲ್ನ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಹ್ಯಾರಿ ಬ್ರೂಕ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬರೋಬ್ಬರಿ 6.25 ಕೋಟಿ ರೂ.ಗೆ ಖದೀಸಿತ್ತು. ಇದೀಗ ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಬ್ರೂಕ್ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ.
ಹೀಗಾಗಿ ಹ್ಯಾರಿ ಬ್ರೂಕ್ ಇನ್ನು ಎರಡು ವರ್ಷಗಳ ಕಾಲ ಐಪಿಎಲ್ನಲ್ಲಿ ಕಾಣಿಸಿಕೊಳ್ಳುವಂತಿಲ್ಲ. ಅದರಂತೆ ಐಪಿಎಲ್ 2026 ಮತ್ತು 2027 ರ ಹರಾಜಿಗೆ ಇಂಗ್ಲೆಂಡ್ ಆಟಗಾರನನ್ನು ಪರಿಣಿಸಲಾಗುವುದಿಲ್ಲ ಎಂದು ತಿಳಿದು ಬಂದಿದೆ. ಹಾಗಾಗಿ ಹ್ಯಾರಿ ಬ್ರೂಕ್ ಮತ್ತೆ ಐಪಿಎಲ್ ಆಡಬೇಕೆಂದರೆ 2028 ರವರೆಗೆ ಕಾಯಲೇಬೇಕು.
ಇಂತಹದೊಂದು ನಿಯಮ ಜಾರಿಗೊಳಿಸಲು ಮುಖ್ಯ ಕಾರಣ, ಕೆಲ ಆಟಗಾರರು ಆಯ್ಕೆಯಾದರೂ ಐಪಿಎಲ್ ಆರಂಭದ ವೇಳೆ ಹಿಂದೆ ಸರಿಯುತ್ತಿರುವುದು. ವಿದೇಶಿ ಆಟಗಾರರ ಇಂತಹ ನಡೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಸಿಸಿಐ ಹೊಸ ನಿಯಮವನ್ನು ಪರಿಚಯಿಸಿದೆ.