ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯ ಮೊದಲ ಪಂದ್ಯ ಶುರುವಾಗಿದೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಇನ್ನು ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಹಾಗೂ ಹರ್ಷಿತ್ ರಾಣಾ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ. ಹಾಗೆಯೇ ಗಾಯದ ಕಾರಣ ವಿರಾಟ್ ಕೊಹ್ಲಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ.
ಐದು ಪಂದ್ಯಗಳ ಟಿ20 ಸರಣಿಯಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡವನ್ನು 1-4 ಅಂತರದಿಂದ ಸೋಲಿಸಿದ್ದ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯಲ್ಲೂ ಅದೇ ಪ್ರದರ್ಶನವನ್ನು ಮುಂದುವರೆಸಲು ಎದುರು ನೋಡುತ್ತಿದೆ. ಚಾಂಪಿಯನ್ಸ್ ಟ್ರೋಫಿಯ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಬಹಳ ಮುಖ್ಯವಾಗಿದ್ದು, ಎರಡು ತಂಡಗಳು ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿವೆ. ನಾಗ್ಪುರದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಜೋಸ್ ಬಟ್ಲರ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಇಂಗ್ಲೆಂಡ್ ಪ್ಲೇಯಿಂಗ್ 11: ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಶುಭ್ಮನ್ ಗಿಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ.