Wednesday, December 6, 2023

Latest Posts

ಬರೋಬ್ಬರಿ 17 ವರ್ಷಗಳ ಬಳಿಕ ಪಾಕ್ ಗೆ ಬಂದಿಳಿದ ಇಂಗ್ಲೆಂಡ್ ಕ್ರಿಕೆಟ್ ತಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಾಕಿಸ್ತಾನ ವಿರುದ್ದ 7 ಪಂದ್ಯಗಳ ಟಿ20 ಸರಣಿಯನ್ನಾಡಲು ಇಂಗ್ಲೆಂಡ್ ಕ್ರಿಕೆಟ್ ತಂಡವು ಬರೋಬ್ಬರಿ 17 ವರ್ಷಗಳ ಬಳಿಕ ಕರಾಚಿಗೆ ಬಂದಿಳಿದಿದೆ.

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಆಡಲಿರುವ ಕೊನೆಯ ಟಿ20 ಸರಣಿ ಇದಾಗಲಿದೆ.

ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ನೇತೃತ್ವದ ತಂಡವು ತಮ್ಮ ಚಾರ್ಟೆಡ್‌ ವಿಮಾನದ ಮೂಲಕ ಕರಾಚಿ ಏರ್‌ಪೋರ್ಟ್‌ಗೆ ಬಂದಿಳಿದಿದೆ. ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ಪದಾಧಿಕಾರಿಗಳು, ಇಂಗ್ಲೆಂಡ್ ತಂಡವನ್ನು ಕರಾಚಿ ಏರ್‌ಪೋರ್ಟ್‌ನಲ್ಲಿ ಸ್ವಾಗತಿಸಿದರು.
ಇಂಗ್ಲೆಂಡ್ ಕ್ರಿಕೆಟ್ ತಂಡವು ಕರಾಚಿ ಹಾಗೂ ಲಾಹೋರ್‌ನಲ್ಲಿ ಪಾಕಿಸ್ತಾನ ವಿರುದ್ದ 7 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಸೆಪ್ಟೆಂಬರ್ 20, 22, 23 ಹಾಗೂ 25ರಂದು ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ಮೊದಲ 4 ಟಿ20 ಪಂದ್ಯಗಳು ನಡೆದರೇ, ಲಾಹೋರ್‌ನ ಗಢಾಫಿ ಸ್ಟೇಡಿಯಂನಲ್ಲಿ ಇನ್ನುಳಿದ ಮೂರು ಪಂದ್ಯಗಳು(ಸೆಪ್ಟೆಂಬರ್ 28, 30 ಹಾಗೂ ಅಕ್ಟೋಬರ್ 02) ನಡೆಯಲಿವೆ.

ಇಂಗ್ಲೆಂಡ್ ಕ್ರಿಕೆಟ್ ತಂಡವು ಕರಾಚಿ ಏರ್ಪೋರ್ಟ್‌ನಿಂದ ನೇರವಾಗಿ ಹೋಟೆಲ್‌ಗೆ ತೆರಳಿದೆ. ಈ ಸಂದರ್ಭದಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿತ್ತು.

ಇಂಗ್ಲೆಂಡ್ ಕ್ರಿಕೆಟ್‌ ತಂಡವು 2005ರಲ್ಲಿ ಕೊನೆಯ ಬಾರಿಗೆ ಪಾಕಿಸ್ತಾನದಲ್ಲಿ ಕ್ರಿಕೆಟ್ ಪಂದ್ಯಗಳನ್ನಾಡಿತ್ತು. ಇದಾದ ಬಳಿಕ ನಾನಾ ಕಾರಣಗಳಿಂದಾಗಿ ಪಾಕ್‌ ನೆಲದಲ್ಲಿ ಕ್ರಿಕೆಟ್‌ ಸರಣಿಯನ್ನಾಡಲು ಇಂಗ್ಲೆಂಡ್ ತಂಡವು ತಂಡವು ಹಿಂದೇಟು ಹಾಕಿತ್ತು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!