Thursday, December 8, 2022

Latest Posts

ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋತ ಇಂಗ್ಲೆಂಡ್: ಸರಣಿ ಗೆದ್ದ ಸಂಭ್ರಮದಲ್ಲಿ ಕಾಂಗರೂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಹೀನಾಯ ಸೋತಿದೆ. ಈ ಮೂಲಕ ಆಸೀಸ್ 3-0 ಅಂತರದಿಂದ ಸರಣಿ ಗೆದ್ದಿದೆ.

ಅಂತಿಮ ಪಂದ್ಯದಲ್ಲಿ ಜೋಸ್ ಬಟ್ಲರ್ ತಂಡ 221 ರನ್‌ಗಳ ಹೀನಾಯ ಸೋಲು ಅನುಭವಿಸಿದೆ.

ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 355 ರನ್ ಗಳಿಸಿತ್ತು. ಮಳೆ ಬಾಧಿತ ಈ ಪಂದ್ಯದಲ್ಲಿ 2 ಓವರ್‌ಗಳನ್ನು ಕಡಿತಗೊಳಿಸಿ ಇಂಗ್ಲೆಂಡ್‌ಗೆ 364 ರನ್‌ಗಳ ಗುರಿ ನೀಡಲಾಯಿತು. ಉತ್ತರವಾಗಿ ಆಂಗ್ಲರ ತಂಡ ಕೇವಲ 142 ರನ್‌ಗಳಿಗೆ ಆಲೌಟ್ ಆಯಿತು.

ಒಟ್ಟಾರೆ ಈ ಇಡೀ ಸರಣಿಯಲ್ಲಿ ಇಂಗ್ಲೆಂಡ್ ಪ್ರದರ್ಶನ ತೀರಾ ಕಳಪೆಯಾಗಿದ್ದು, ಇದರಿಂದಾಗಿ ಕ್ಲೀನ್ ಸ್ವೀಪ್ ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯದಲ್ಲಿ 152 ರನ್ ಗಳಿಸಿದ ಟ್ರಾವಿಸ್ ಹೆಡ್‌ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಗಿದ್ದು, ಡೇವಿಡ್ ವಾರ್ನರ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!