ಫೈನಲ್ ನಲ್ಲಿ ಕೈಗೆ ಕಪ್ಟು ಪಟ್ಟಿ ಧರಿಸಿ ಕಣಕ್ಕಿಳಿದ ಇಂಗ್ಲೆಂಡ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಆಟಗಾರರು ಕೈಗೆ ಕಪ್ಟು ಪಟ್ಟಿ ಧರಿಸಿ ಕಣಕ್ಕಿಳಿದಿದ್ದಾರೆ.

ಫೈನಲ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಡೇವಿಡ್ ಇಂಗ್ಲೀಷ್‌ ಸಾವನ್ನಪ್ಪಿದ್ದಾರೆ. ಅವರಿಗೆ ಸಂತಾಪ ಸೂಚಿಸುವ ಸಲುವಾಗಿ ಇಂಗ್ಲೆಂಡ್ ತಂಡ ಕಪ್ಪು ಪಟ್ಟಿಯೊಂದಿಗೆ ಮೈದಾನಕ್ಕಿಳಿದಿದೆ.

ಇಂಗ್ಲೆಂಡ್ ತಂಡದ ಮಾಜಿ ಆಟಗಾರರಾಗಿದ್ದ ಡೇವಿಡ್ ಇಂಗ್ಲೀಷ್‌ ಅವರನ್ನು ಇಂಗ್ಲೆಂಡ್ ಕ್ರಿಕೆಟ್‍ನ ಗಾಡ್‍ಫಾದರ್ ಎಂದು ಕರೆಯಲಾಗುತ್ತಿತ್ತು. 76 ವರ್ಷದ ಡೇವಿಡ್ ಅವರು ಇಂದು ಹೃದಯಘಾತದಿಂದ ಮೃತಪಟ್ಟಿದ್ದಾರೆ.

ಡೇವಿಡ್ 1,500ಕ್ಕೂ ಹೆಚ್ಚು ಪ್ರಥಮ ದರ್ಜೆ ಪಂದ್ಯ ಮತ್ತು 125 ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು. ಕ್ರಿಕೆಟ್‍ನಿಂದ ನಿವೃತ್ತಿ ಹೊಂದಿದ ಬಳಿಕ ಚಾರಿಟೇಬಲ್ ಟ್ರಸ್ಟ್‌ಗಳನ್ನು ನಡೆಸಿ ಯುವ ಕ್ರಿಕೆಟಿಗರಿಗೆ ಸಲಹೆ ನೀಡುತ್ತಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!