ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಚಿತ್ರರಂಗಕ್ಕೆ ನೀಡಿದ ಕೊಡುಗೆಗೆ ಬ್ರಿಟಿಷ್ ಸರ್ಕಾರದಿಂದ ‘ಜೀವಮಾನ ಸಾಧನೆ ಪ್ರಶಸ್ತಿ’ ಲಭಿಸಿದೆ. ನಿನ್ನೆ ಇಂಗ್ಲೆಂಡ್ನ ಪಾರ್ಲಿಮೆಂಟ್ನಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸುದ್ದಿ ಕೇಳಿದ ಚಿರಂಜೀವಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಚಿತ್ರರಂಗಕ್ಕೆ ಚಿರಂಜೀವಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಕೊಟ್ಟಿದ್ದಾರೆ. ಇದರ ಜೊತೆಗೆ ಚಿರಂಜೀವಿ ಕಡೆಯಿಂದ ಅನೇಕ ಸಾಮಾಜಿಕ ಕೆಲಸಗಳು ಕೂಡ ಆಗುತ್ತಿವೆ. ಇದೆಲ್ಲವನ್ನೂ ಗಮನಿಸಿದ ಬ್ರಿಟಿಷ್ ಸರ್ಕಾರ ಅವರಿಗೆ ಜೀವಮಾನ ಸಾಧನೆ ಅವಾರ್ಡ್ ನೀಡಿದೆ.
ಈ ಗೌರವ ಭಾರತದ ಚಿತ್ರರಂಗದ ಪಾಲಿಗೆ ಹೆಮ್ಮೆಯಾಗಿದೆ. ಈ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು, ಸರ್ಕಾರಿ ಅಧಿಕಾರಿಗಳು ಭಾಗವಹಿಸಿದ್ದರು. ಈ ರೀತಿ ಅವಾರ್ಡ್ ಪಡೆದ ಮೊದಲ ಭಾರತೀಯ ಎಂಬ ಹೆಮ್ಮೆಗೆ ಚಿರಂಜೀವಿ ಪಾತ್ರರಾಗಿದ್ದಾರೆ.