Sunday, August 14, 2022

Latest Posts

ಟಿ 20 ವಿಶ್ವಕಪ್​ಗೆ ಇಂಗ್ಲೆಂಡ್ ತಂಡ ಪ್ರಕಟ: ಬೆನ್ ಸ್ಟೋಕ್ಸ್- ಆರ್ಚರ್ ಗೆ ಕೋಕ್!​

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

2021 ಟಿ 20 ವಿಶ್ವಕಪ್​ಗೆ ಇಂಗ್ಲೆಂಡ್ ಕ್ರಿಕೆಟ್ ತಂಡವನ್ನು ಘೋಷಿಸಿದೆ. 15 ಸದಸ್ಯರ ತಂಡವನ್ನು ಇಯೊನ್ ಮಾರ್ಗನ್ ನಾಯಕತ್ವದಲ್ಲಿ ಘೋಷಿಸಲಾಗಿದೆ.
ಆಘಾತಕಾರಿ ಸುದ್ದಿಯೆಂದರೆ ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಮತ್ತು ವೇಗದ ಬೌಲರ್ ಜೋಫ್ರಾ ಆರ್ಚರ್​ನನ್ನು ತಂಡದಿಂದ ಕೈಬಿಡಲಾಗಿದೆ.
ಮಾನಸಿಕ ಆರೋಗ್ಯದ ಕಾರಣದಿಂದಾಗಿ ಸ್ಟೋಕ್ಸ್ ಕ್ರಿಕೆಟ್​ನಿಂದ ದೂರವಿದ್ದಾರೆ. ಅದೇ ಸಮಯದಲ್ಲಿ, ಆರ್ಚರ್ ಇಂಜುರಿಯಿಂದಾಗಿ ಮುಂದಿನ ವರ್ಷದವರೆಗೆ ತಂಡಕ್ಕೆ ಹಿಂತಿರುಗಲು ಸಾಧ್ಯವಾಗುವುದಿಲ್ಲ.
ಮತ್ತೊಂದು ಅಚ್ಚರಿಯೆಂದರೆ, ಮಿಲ್ಸ್ ಸುಮಾರು ನಾಲ್ಕು ವರ್ಷಗಳ ನಂತರ ತಂಡಕ್ಕೆ ಮರಳುತ್ತಿದ್ದಾರೆ.ಅದೇ ಸಮಯದಲ್ಲಿ, ಮೂರು ಆಟಗಾರರನ್ನು ಮೀಸಲು ಇಡಲಾಗಿದೆ.
ಇಂಗ್ಲೆಂಡ್ ತಂಡ: ಇಯಾನ್ ಮಾರ್ಗನ್, ಮೊಯೀನ್ ಅಲಿ, ಜಾನಿ ಬೈರ್‌ಸ್ಟೊ, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಟೈಮಲ್ ಮಿಲ್ಸ್, ಆದಿಲ್ ರಶೀದ್, ಜೇಸನ್ ರಾಯ್, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss