ಹೊಸದಿಗಂತ ಡಿಜಿಟಲ್ ಡೆಸ್ಕ್
ಇಂದಿನಿಂದ ಎಡ್ಜ್‌ಬಾಸ್ಟನ್‌ನಲ್ಲಿ ಭಾರತದ ವಿರುದ್ಧ ಆರಂಭಗೊಳ್ಳಲಿರುವ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಬಲಿಷ್ಟ ಪ್ಲೇಯಿಂಗ್ 11 ಪ್ರಕಟಿಸಿದೆ.
ಕಳೆದ ವರ್ಷ ಭಾರತ 5 ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಗೆ ಪ್ರವಾಸ ಕೈಗೊಂಡಿದ್ದ ವೇಳೆ ಕೋವಿಡ್ ಪ್ರಕರಣಗಳು ಹೆಚ್ಚಳಗೊಂಡಿದ್ದರಿಂದ ಸರಣಿ ಅರ್ಧಕ್ಕೆ ಮೊಟಕುಗೊಂಡಿತ್ತು. ಈ ಸಂದರ್ಭದಲ್ಲಿ ರದ್ದುಗೊಂಡಿದ್ದ 5 ನೇ ಟೆಸ್ಟ್ ಪಂದ್ಯ ಇಂದಿನಿಂದ ಆರಂಭಗೊಳ್ಳುತ್ತಿದೆ. ಈ ಸರಣಿಯಲ್ಲಿ ಭಾರತ 2-1 ಅಂತರದ ಮುನ್ನಡೆ ಸಾಧಿಸಿದೆ.
ಹೊಸ ನಾಯಕರನ್ನು ಬೆನ್ ಸ್ಟೋಕ್ಸ್ ತಂಡದ ನಾಯಕತ್ವ ಜವಾಬ್ದಾರಿ ಹೊತ್ತಿದ್ದಾರೆ. ಗಾಯದ ಕಾರಣದಿಂದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯವನ್ನು ಕಳೆದುಕೊಂಡಿದ್ದ ಇಂಗ್ಲೆಂಡ್‌ನ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಪ್ಲೇಯಿಂಗ್ XI ಗೆ ಮರಳಿದ್ದಾರೆ. ಆಂಡರ್ಸನ್ ಟೆಸ್ಟ್‌ನಲ್ಲಿ 650 ವಿಕೆಟ್‌ಗಳನ್ನು ದಾಖಲಿಸಲು ಒಂದು ವಿಕೆಟ್ ದೂರದಲ್ಲಿದ್ದಾರೆ. ಈ ಪಂದ್ಯದಲ್ಲಿ ಆ ಮೈಲುಗಲ್ಲು ದಾಟುವ ನಿರೀಕ್ಷೆಯಿದೆ.
ಇಂಗ್ಲೆಂಡ್ ವಿಕೆಟ್ ಕೀಪರ್ ಬೆನ್ ಫೋಕ್ಸ್ ಕೊರೊನಾ ಕಾರಣದಿಂದ ತಂಡದಿಂದ ಹೊರಗುಳಿದಿದ್ದು ಅವರ ಬದಲಿಗೆ ಸ್ಯಾಮ್ ಬಿಲ್ಲಿಂಗ್ಸ್ ವಿಕೆಟ್ ಕೀಪರ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಇಂದು ಮಧ್ಯಾಹ್ನ 3:00 ಗಂಟೆಗೆ ಪಂದ್ಯ ಆರಂಭಗೊಳ್ಳಲಿದೆ.
ಇಂಗ್ಲೆಂಡ್ ಪ್ಲೇಯಿಂಗ್ XI:
ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಒಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್ (ಸಿ), ಸ್ಯಾಮ್ ಬಿಲ್ಲಿಂಗ್ಸ್ (ವಿ.ಕೀ), ಮ್ಯಾಥ್ಯೂ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್.