ನ್ಯೂಜಿಲೆಂಡ್ ವಿರುದ್ದ 20 ರನ್‌ಗಳ ರೋಚಕ ಜಯ ಸಾಧಿಸಿದ ಇಂಗ್ಲೆಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಘಟಿತ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡವು ನ್ಯೂಜಿಲೆಂಡ್ ವಿರುದ್ದ 20 ರನ್‌ಗಳ ರೋಚಕ ಜಯ ಸಾಧಿಸಿದೆ.

ಇಂಗ್ಲೆಂಡ್ ನೀಡಿದ್ದ 180 ರನ್‌ಗಳ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್‌ ಗಳಿಸಲಷ್ಟೇ ಶಕ್ತವಾಯಿತು.

ನ್ಯೂಜಿಲೆಂಡ್ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಡೆವೊನ್ ಕಾನ್‌ವೇ 3 ರನ್ ಗಳಿಸಿ ಕ್ರಿಸ್ ವೋಕ್ಸ್‌ಗೆ ವಿಕೆಟ್ ಒಪ್ಪಿಸಿದರೆ, ಫಿನ್ ಅಲೆನ್ 16 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಮೂರನೇ ವಿಕೆಟ್‌ಗೆ ಜತೆಯಾದ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಕಳೆದ ಪಂದ್ಯದ ಗೆಲುವಿನ ಹೀರೋ ಗ್ಲೆನ್ ಫಿಲಿಫ್ಸ್ 91 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ನಾಯಕ ಕೇನ್‌ ವಿಲಿಯಮ್ಸನ್‌ 40 ಎಸೆತಗಳಲ್ಲಿ 40 ರನ್ ಬಾರಿಸಿ ವಿಕೆಟ್‌ ಒಪ್ಪಿಸಿದರು.

ಗ್ಲೆನ್ ಫಿಲಿಫ್ಸ್‌ ಮತ್ತೊಮ್ಮೆ ಭರ್ಜರಿ ಅರ್ಧಶತಕ ಸಿಡಿಸಿ ಕಿವೀಸ್ ಪಾಳಯದಲ್ಲಿ ಗೆಲುವಿನ ಆಸೆ ಮೂಡಿಸಿದ್ದರು. ಸಿಕ್ಕ ಜೀವದಾನವನ್ನು ಸದುಪಯೋಗ ಪಡಿಸಿಕೊಂಡ ಗ್ಲೆನ್ ಫಿಲಿಫ್ಸ್‌ 62 ರನ್ ಬಾರಿಸಿ 18ನೇ ಓವರ್‌ನಲ್ಲಿ ವಿಕೆಟ್‌ ಒಪ್ಪಿಸಿದ್ದರು.
ಇನ್ನು ಕೊನೆಯಲ್ಲಿ ಜೇಮ್ಸ್ ನೀಶಮ್(6), ಡೇರಲ್ ಮಿಚೆಲ್(3) ಅಲ್ಪಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದು ನ್ಯೂಜಿಲೆಂಡ್ ತಂಡದ ಪಾಲಿಗೆ ಹಿನ್ನೆಡೆಯಾಗಿ ಪರಿಣಮಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!