ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಮಹತ್ವದ ನಿರ್ಧಾರ ಪ್ರಕಟಿಸಿದ ಇಂಗ್ಲೆಂಡ್‌ನ ಸ್ಯಾಮ್ ಬಿಲ್ಲಿಂಗ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಇಂಗ್ಲೆಂಡ್‌ ಅಮೋಘವಾಗಿ ಗಗೆಲುವು ಸಾಧಿಸಿದ್ದು, ಇದರ ಬೆನ್ನಲ್ಲೇ ಇಂಗ್ಲೆಂಡ್‌ನ ಟಿ20 ಸ್ಪೆಷಲಿಸ್ಟ್ ಸ್ಯಾಮ್ ಬಿಲ್ಲಿಂಗ್ಸ್ ಐಪಿಎಲ್‌ ನಿಂದ ದೂರು ಉಳಿಯುವುದಾಗಿ ತಿಳಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಬರೆದಿರುವ ಸ್ಯಾಮ್ ಬಿಲ್ಲಿಂಗ್ಸ್, ‘ಮುಂದಿನ ಐಪಿಎಲ್‌ನಲ್ಲಿ ಭಾಗವಹಿಸುವುದಿಲ್ಲ ಎಂದು ಕಠಿಣ ನಿರ್ಧಾರ ತೆಗೆದುಕೊಂಡಿದ್ದೇನೆ. ನಾನು ದೀರ್ಘ ಸ್ವರೂಪಗಳ ಮೇಲೆ ಹೆಚ್ಚು ಗಮನಹರಿಸಲು ಬಯಸುತ್ತೇನೆ. ನನಗೆ ಅವಕಾಶ ನೀಡಿದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಧನ್ಯವಾದಗಳು. ಭವಿಷ್ಯದಲ್ಲಿ ಮತ್ತೆ ಐಪಿಎಲ್ ಆಡುವ ಭರವಸೆ ಇದೆ ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಕಳೆದ ಸೀಸನ್ನಲ್ಲಿ ಸ್ಯಾಮ್ ಬಿಲ್ಲಿಂಗ್ಸ್ ಅವರನ್ನು ಕೋಲ್ಕತ್ತಾ 2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಈ ಬಲಗೈ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್‌ಗೆ ವಿಶೇಷ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಬಿಲ್ಲಿಂಗ್ಸ್ ಕಳೆದ ಐಪಿಎಲ್ನಲ್ಲಿ ಕೇವಲ 24.14ರ ಸರಾಸರಿಯಲ್ಲಿ 169 ರನ್ ಗಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!