ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆ ಪಡುವ ಪರಿಸ್ಥಿತಿ ಬರಲಿದೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಸ್ಥಳೀಯ ಭಾಷೆಗಳು ಭಾರತದ ಗುರುತಿನ ಕೇಂದ್ರವಾಗಿದ್ದು, ವಿದೇಶಿ ಭಾಷೆಗಳಿಗಿಂತ ಹೆಚ್ಚು ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ಈ ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ. ನಮ್ಮ ದೇಶದ ಭಾಷೆಗಳು ನಮ್ಮ ಸಂಸ್ಕೃತಿಯ ರತ್ನಗಳು ಎಂದು ನಾನು ನಂಬುತ್ತೇನೆ. ನಮ್ಮ ಭಾಷೆಗಳಿಲ್ಲದೆ, ನಾವು ನಿಜವಾದ ಭಾರತೀಯರಾಗುವುದಿಲ್ಲ. ಪ್ರಪಂಚದಾದ್ಯಂತ ವಸಾಹತುಶಾಹಿ ಗುಲಾಮಗಿರಿಯ ಸಂಕೇತವಾಗಿ ಇಂಗ್ಲಿಷ್ ಅನ್ನು ತಿರಸ್ಕರಿಸಲಾಗುವುದು ಎಂದು ನುಡಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!