March 6, 2026
Friday, March 6, 2026
spot_img

ಇಂಗ್ಲಿಷ್ ತರಬೇತಿ, ಡಿಜಿಟಲ್ ಟ್ಯೂಟರ್: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೀಗ ಸುವರ್ಣ ಕಾಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಿಸಲು ಮತ್ತು ಗುಣಮಟ್ಟವನ್ನು ಹೆಚ್ಚಿಸಲು ಈ ಬಾರಿಯ ಬಜೆಟ್‌ನಲ್ಲಿ ಮಹತ್ವದ ಕ್ರಮಗಳನ್ನು ಘೋಷಿಸಲಾಗಿದೆ.

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳ ಉತ್ತಮ ನಿರ್ವಹಣೆಗಾಗಿ ಒಟ್ಟು 125 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ವಿಶೇಷವೆಂದರೆ, ಈ ಹಣವು ಮಧ್ಯವರ್ತಿಗಳಿಲ್ಲದೆ ನೇರವಾಗಿ ಆಯಾ ಶಾಲಾ-ಕಾಲೇಜುಗಳ ಅಭಿವೃದ್ಧಿ ಸಮಿತಿಗಳಿಗೆ (SDMC) ವರ್ಗಾವಣೆಯಾಗಲಿದೆ.

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಯಶಸ್ವಿಯಾಗಿ ನಡೆಸಲು ಶಿಕ್ಷಕರಿಗೆ ವಿಶೇಷ ಇಂಗ್ಲಿಷ್ ಭಾಷಾ ತರಬೇತಿ ನೀಡಲಾಗುವುದು. ಈ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮಕ್ಕಾಗಿ 24 ಕೋಟಿ ರೂ. ವ್ಯಯಿಸಲಾಗುತ್ತಿದೆ.

8 ರಿಂದ 12ನೇ ತರಗತಿಯ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ನೆರವಾಗಲು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ. IIT ಧಾರವಾಡದ ಸಹಯೋಗದೊಂದಿಗೆ 5 ಕೋಟಿ ರೂ. ವೆಚ್ಚದಲ್ಲಿ ‘ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್’ ಸೌಲಭ್ಯವನ್ನು ಒದಗಿಸಿ, ವಿದ್ಯಾರ್ಥಿಗಳು ತಾಂತ್ರಿಕವಾಗಿ ಮುಂಚೂಣಿಯಲ್ಲಿರಲು ಹಾದಿ ಮಾಡಿಕೊಡಲಾಗುವುದು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !