ಸಿನಿ ಪತ್ರಿಕಾ ಲೋಕದ ಹಿರಿಯ ಛಾಯಾಗ್ರಾಹಕ ಡಿ.ಸಿ.ನಾಗೇಶ್‌ ಇನ್ನಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕನ್ನಡ ಸಿನಿಮಾ ಪತ್ರಿಕೋದ್ಯಮದ ಹಿರಿಯ ಛಾಯಾಗ್ರಾಹಕ ಡಿ.ಸಿ.ನಾಗೇಶ್‌ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ಕಳೆದ ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಶನಿವಾರ ಮುಂಜಾನೆ ವಿಧಿವಶರಗಿದ್ದಾರೆ.
ಡಿ.ಸಿ. ನಾಗೇಶ್‌ ಅವರು ಸುಮಾರು 4 ದಶಕಗಳಿಗಿಂತ ಹೆಚ್ಚು ಕಾಲ ಸಿನಿಮಾ ಪತ್ರಿಕಾ ಲೋಕದಲ್ಲಿ ತಮ್ಮದೇ ವಿಶೇಷ ಛಾಪು ಮೂಡಿಸಿದ್ದಾರೆ. ಸಾಕಷ್ಟು ನಟ-ನಟಿಯರ ಛಾಯಾಚಿತ್ರಗಳನ್ನು ಸೆರೆ ಹಿಡಿದ್ದಾರೆ.
ಇಂದು ಸಂಜೆ ವಿಲ್ಸನ್‌ ಗಾರ್ಡನ್‌ ನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!