ವಿಳಂಬ ಸಾಕು, ಕಾರಣ ಬೇಡ, ಆದಷ್ಟು ಬೇಗ ಗ್ಯಾರಂಟಿ ಯೋಜನೆ ಹಣ ವರ್ಗಾಯಿಸಿ: ನಿಖಿಲ್ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ಯಾರಂಟಿ ಯೋಜನೆ ಹಣ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು. ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯನವರು 4 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ಆದರೆ ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ವಿಳಂಬ ಸಾಕು, ಕಾರಣ ಬೇಡ, ಆದಷ್ಟು ಬೇಗ ಹಣ ವರ್ಗಾಯಿಸಿ ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here