ಪುರುಷರ ಸೀಟ್‌ನಲ್ಲಿ ಪುರುಷರೇ ಕೂರುವಂತೆ ನೋಡಿಕೊಳ್ಳಿ: ಕೆಎಸ್‌ಆರ್‌ಟಿಸಿ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ತನ್ನ ಸಿಬ್ಬಂದಿಗೆ ಕೆಎಸ್‌ಆರ್‌ಟಿಸಿ ಮೈಸೂರು ಘಟಕ ಸೂಚನೆ ನೀಡಿದೆ.

ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯದ ಸರ್ಕಾರಿ ಬಸ್ಸುಗಳು ಮಹಿಳಾ ಬಸ್ಸುಗಳಾಗಿ ಬದಲಾಗಿದೆ. ಉಚಿತ ಪ್ರಯಾಣ ಘೋಷಣೆಯಾದ ದಿನದಿಂದ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ನಮಗೆ ಸೀಟು ಸಿಗುತ್ತಿಲ್ಲ ಎಂದು ಪುರುಷರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮೊದಲೇ ಬಸ್ಸುಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ದುಡ್ಡು ಕೊಟ್ಟು ಟಿಕೆಟ್‌ ಪಡೆದರೂ ನಮಗೆ ಸೀಟು ಸಿಗುತ್ತಿಲ್ಲ. 60-70 ಕಿ.ಮೀ ದೂರ ಪ್ರಯಾಣವನ್ನು ನಿಂತುಕೊಂಡೇ ಮಾಡುವ ಪರಿಸ್ಥಿತಿ ಹಲವು ಭಾಗಗಳಲ್ಲಿ ನಿರ್ಮಾಣವಾಗಿದೆ ಎಂದು ಪುರುಷರು ಸಿಟ್ಟು ಹೊರಹಾಕುತ್ತಿದ್ದಾರೆ.

ಬಸ್ಸಿನಲ್ಲಿ ನಿಂತುಕೊಂಡೇ ಪ್ರಯಾಣಿಸಿ ರೋಸಿಹೋದ ಮೈಸೂರು ನಿವಾಸಿ ವಿಷ್ಣುವರ್ಧನ್ ಪುರುಷರಿಗೂ ಸೀಟ್ ಕೊಡಿ ಎಂದು ಕೆಎಸ್‌ಆರ್‌ಟಿಸಿ ಮೈಸೂರು ಘಟಕಕ್ಕೆ ದೂರು ಕೊಟ್ಟಿದ್ದಾರೆ. ಮೈಸೂರು ನಗರ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಬಹುತೇಕ ಮಹಿಳೆಯರೇ ಕುಳಿತುಕೊಂಡಿರುತ್ತಾರೆ. ನಮಗೆ ಸೀಟು ಸಿಗುತ್ತಿಲ್ಲ. ಹೀಗಾಗಿ ನಮಗೂ ಕುಳಿತುಕೊಳ್ಳಲು ಸೀಟು ಕೊಡಿ ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಇದನ್ನು ಸ್ವೀಕರಿಸಿದ ಕೆಎಸ್‌ಆರ್‌ಟಿಸಿ ಇನ್ಮುಂದೆ ಪುರುಷರ ಸೀಟ್‌ನಲ್ಲಿ ಪುರುಷರಿಗೆ ಕೂರಲು ಜಾಗಬಿಡಿ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!