ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಮೂರು ದಿನ ಪ್ರವೇಶ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ದತ್ತಪೀಠದಲ್ಲಿ ಶ್ರೀರಾಮ ಸೇನೆ ವತಿಯಿಂದ 20ನೇ ವರ್ಷದ ದತ್ತಮಾಲಾ ಅಭಿಯಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ದತ್ತ ಭಕ್ತರು ಮಾಲಾಧಾರಿಗಳಾಗಿ ದತ್ತಪೀಠಕ್ಕೆ ಭೇಟಿ ನೀಡಲಿದ್ದಾರೆ.

ದತ್ತಮಾಲಾ ಅಭಿಯಾನ ಪ್ರಯುಕ್ತ ಚಿಕ್ಕಮಗಳೂರಿನಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಪ್ರಸಿದ್ಧ ಪ್ರವಾಸಿ ತಾಣಗಳಿಗೂ ನ.6ರ ವರೆಗೆ ಪ್ರವೇಶ ನಿಷೇಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!