ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರವಾಸಿಗರ ಪ್ರಸಿದ್ಧ ತಾಣ ನಂದಿಬೆಟ್ಟಕ್ಕೆ ಇಂದಿನಿಂದ ಎರಡು ದಿನಗಳ ಕಾಲ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ. ವಿಷಯ ಗೊತ್ತಿಲ್ಲದೆ ನಂದಿಬೆಟ್ಟಕ್ಕೆ ಬಂದ ಪ್ರವಾಸಿಗರನ್ನು ವಾಪಸ್ ಕಳುಹಿಸಲಾಗುತ್ತಿದೆ.
ಜುಲೈ 3ರಂದು ಮುದ್ದೇನಹಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿದ್ದಾರೆ. ಚಿಕ್ಕಬಳ್ಳಾಫುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಶ್ರೀ ಸತ್ಯಸಾಯಿ ಲೋಕಸೇವಾ ಆಶ್ರಮಕ್ಕೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಭದ್ರತೆ ದೃಷ್ಟಿಯಿಂದ ಇಂದಿನಿಂದ ಎರಡು ದಿನ ನಂದಿಬೆಟ್ಟ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರವೀಂದ್ರ ಆದೇಶ ಹೊರಡಿಸಿದ್ದರು. ಆದರೆ ಪ್ರವೇಶ ನಿರ್ಬಂಧದ ಬಗ್ಗೆ ಮಾಹಿತಿ ಇಲ್ಲದೇ ಪ್ರವಾಸಿಗರು ಆಗಮಿಸಿದ್ದಾರೆ. ಹೀಗಾಗಿ ಗಿರಿಧಾಮಕ್ಕೆ ಬಂದವರನ್ನು ಪೊಲೀಸರು ವಾಪಾಸ್ ಕಳಿಸುತ್ತಿದ್ದಾರೆ.
ಇಂದು ಬೆಳಗ್ಗೆ 6 ರಿಂದ ಜು.3ರ ಸಂಜೆ 6ರ ವರೆಗೆ ಬೆಟ್ಟಕ್ಕೆ ಪ್ರವೇಶ ನಿರ್ಬಂಧ ಇರಲಿದೆ. ಸದ್ಯ ಗಿರಿಧಾಮಗಳಿಗೆ ಬರದಂತೆ ಪ್ರವಾಸಿಗರಿಗೆ ಡಿಸಿ ರವೀಂದ್ರ ಮನವಿ ಮಾಡಿದ್ದಾರೆ.