ಏರ್‌ಪೋರ್ಟ್‌ನಲ್ಲಿ ಕ್ಯಾಬ್‌-ಟ್ಯಾಕ್ಸಿಗೆ ಪ್ರವೇಶ ದರ ನಿಗದಿ: ಸಿಎಂ ಭೇಟಿಗೆ ಮುಂದಾದ ಚಾಲಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಮತ್ತು ಟ್ಯಾಕ್ಸಿಗಳಿಗೆ ಪ್ರವೇಶ ದರ ನಿಗದಿ ಮಾಡಿದೆ.  ಏರ್‌ಪೋರ್ಟ್ ಆಡಳಿತ ಮಂಡಳಿ ನಿಗದಿ ಮಾಡಿರುವ ದರಕ್ಕೆ ಟ್ಯಾಕ್ಸಿ, ಕ್ಯಾಬ್‌ ಚಾಲಕರು ಕಂಗಾಲಾಗಿದ್ದಾರೆ.

ಪ್ರಯಾಣಿಕರನ್ನ ಪಿಕಪ್ ಮಾಡಲು ಪ್ರವೇಶ ದರ 07 ನಿಮಿಷಕ್ಕೆ 150 ರೂ. ಪಾವತಿಸಬೇಕು. ಇನ್ನು 07 ನಿಮಿಷಕ್ಕಿಂತ ಹೆಚ್ಚು ಕಾಲ ನಿಂತರೆ 300 ರೂ. ಪಾವತಿ ಮಾಡಬೇಕು. ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಕಳೆದ ಭಾನುವಾರ ಈ ಹೊಸ ನಿಯಮವನ್ನ ಜಾರಿ ಮಾಡಿತ್ತು. ಇದಕ್ಕೆ ವಿರೋಧ ವ್ಯಕ್ತವಾಗಿದೆ. ದರ ನಿಗದಿ ವಿರೋಧಿಸಿ ಕ್ಯಾಬ್ ಮತ್ತು ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದು, ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ.

ಆದರೆ ಮತ್ತೆ ಇದೇ ಪರಿಸ್ಥಿತಿ ನಿರ್ಮಾಣವಾದೀತು ಎಂದು ಇಂದು  ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರನ್ನ ಚಾಲಕರು ಭೇಟಿ ಮಾಡಲು ಮುಂದಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!