ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಂಭಾಲ್ ಜಿಲ್ಲಾಡಳಿತವು ಡಿಸೆಂಬರ್ 10 ರವರೆಗೆ ವಿದೇಶಿಯರ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಡಿಸೆಂಬರ್ 10 ರವರೆಗೆ ಸಂಬಂಧಪಟ್ಟ ಅಧಿಕಾರಿಗಳ ಅನುಮತಿಯಿಲ್ಲದೆ ಹೊರಗಿನವರು, ಸಾಮಾಜಿಕ ಸಂಘಟನೆಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳು ಜಿಲ್ಲೆಯ ಗಡಿಯನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂದು ಸಂಭಾಲ್ ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ಘೋಷಿಸಿದ್ದಾರೆ.
ಶಾಹಿ ಜಾಮಾ ಮಸೀದಿ ಸಂಕೀರ್ಣದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮಾಹಿತಿ ಸಂಗ್ರಹಿಸಲು ಸಮಾಜವಾದಿ ಪಕ್ಷದ 15 ಸದಸ್ಯರ ನಿಯೋಗ ಸಂಭಾಲ್‌ಗೆ ಭೇಟಿ ನಿಡೋಕು ಮುನ್ನ ಜಿಲ್ಲಾಡಳಿತ ಈ ಕ್ರಮ ತೆಗೆದುಕೊಂಡಿದೆ. ಈ ಕುರಿತು ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ಮಾತನಾಡುತ್ತಾ, ಗೃಹ ಕಾರ್ಯದರ್ಶಿ ಸಂಜಯ್ ಪ್ರಸಾದ್ ಅವರು ತಮಗೆ ಕರೆ ಮಾಡಿ ಸಂಭಾಲ್‌ಗೆ ಭೇಟಿ ನೀಡದಂತೆ ವಿನಂತಿಸಿದ್ದಾರೆ ಎಂದು ತಿಳಿಸಿದ್ದಾರೆ.