ಹೊಸದಿಗಂತ ಡಿಜಿಟಲ್ ಡೆಸ್ಕ್:
ದುನಿಯಾ ಚಿತ್ರದ ಮೂಲಕಸಿನಿಮಾ ರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ವಿಜಯ್ ಸ್ಯಾಂಡಲ್ವುಡ್ನಲ್ಲಿ ತನ್ನದೇ ಆದ ಅಭಿನಯದ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ
ಸದ್ಯ ಸಲಗ ಸಿನಿಮಾದಲ್ಲಿ ನಟನೆ ಜೊತೆಗೆ ನಿರ್ದೇಶಕ ಮಾಡಿ ಸೈ ಎನಿಸಿಕೊಂಡಿದ್ದಾರೆ. ಈ ಎಲ್ಲಾ ಸಕ್ಸಸ್ ನಲ್ಲಿರುವ ದುನಿಯಾ ವಿಜಯ್ ಇದೀಗ ಟಾಲಿವುಡ್ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡ್ತಿದ್ದಾರೆ ಎಂದು ಸುದ್ದಿಗಳು ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ.
ತೆಲುಗಿನ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಅಭಿನಯದ ಹೊಸ ಚಿತ್ರದಲ್ಲಿ ವಿಜಯ್ ಖಳನಟನ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣ ಸಂಸ್ಥೆ ಅಧಿಕೃತವಾಗಿ ಅನೌನ್ಸ್ ಮಾಡಿದೆ.
ಇನ್ನು ಈ ವಿಚಾರವನ್ನು ದುನಿಯಾ ವಿಜಯ್ ಕೂಡ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಹೊಸ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್ ಮಲಿನೇನಿ ಆ್ಯಕ್ಷನ್-ಕಟ್ ಹೇಳಲಿದ್ದು, ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ನಾಯಕಿಯಾಗಿ ಶ್ರುತಿ ಹಾಸನ್ ಕಾಣಿಸಿಕೊಳ್ಳಲಿದ್ದಾರೆ.
ಸದ್ಯ ಸಿನಿಮಾಕ್ಕೆ ಶೀರ್ಷಿಕೆ ಅಂತಿಮವಾಗಿಲ್ಲ.