ರಾಜ್ಯ ಚುನಾವಣಾ ಅಖಾಡಕ್ಕೆ ಸ್ಟಾರ್ ಪ್ರಚಾರಕರ ಎಂಟ್ರಿ: ಏ. 26 ರಂದು ಮಂಡ್ಯಕ್ಕೆ ಯುಪಿ ಸಿಎಂ ಯೋಗಿ!

ಹೊಸದಿಗಂತ ವರದಿ,ಮಂಡ್ಯ:

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಏ. 26ರಂದು ಮಂಡ್ಯಕ್ಕೆ ಭೇಟಿ ನೀಡಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಗೆ ಆಗಮಿಸುವ ಯೋಗಿಆದಿತ್ಯಾನಾಥ್ ಅವರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ನಗರದಲ್ಲಿ ರೋಡ್‌ಶೋ ನಡೆಸಲಿದ್ದಾರೆ.

ರಾಜೇಂದ್ರಪ್ರಸಾದ್ ರಸ್ತೆ (ಆರ್.ಪಿ. ರಸ್ತೆ), ಅಂಬೇಡ್ಕರ್ ವೃತ್ತ (ಕರ್ನಾಟಕ ಬಾರ್ ಸರ್ಕಲ್), ನೂರಡಿ ರಸ್ತೆ, ಹೊಸಹಳ್ಳಿ ವೃತ್ತ, ವಿಶ್ವೇಶ್ವರಯ್ಯ ರಸ್ತೆ (ವಿ.ವಿ. ರಸ್ತೆ) ಸೇರಿದಂತೆ ವಿವಿಧ ರಸ್ತೆಗಳಲ್ಲಿ ರೋಡ್‌ಶೋ ನಡೆಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವರು.

ವಿ.ವಿ. ರಸ್ತೆ ಮೂಲಕ ಮಹಾವೀರ ವೃತ್ತ, ಮೈಸೂರು-ಬೆಂಗಳೂರು ಹೆದ್ದಾರಿ ಮಾರ್ಗವಾಗಿ ಸಿಲ್ವರ್ ಜ್ಯೂಬಿಲಿ ಪಾರ್ಕಿನವರೆಗೆ ರೋಡ್‌ಶೋ ನಡೆಸುವರು. ಬಳಿಕ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಕಾರ‌್ಯಕರ್ತರು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವರು.
ಏ. 25ರಂದೇ ಬೆಂಗಳೂರಿಗೆ ಆಗಮಿಸುವ ಯೋಗಿಆದಿತ್ಯಾನಾಥ್ ಅವರು, ರಾತ್ರಿ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದು, ಏ. 26ರಂದು ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!