ಚುನಾವಣಾ ಪ್ರಚಾರಕ್ಕೆ ಸ್ಟಾರ್ ಗಳ ಎಂಟ್ರಿ: ಡಿಎಂಕೆ ಸಂಸದೆ ಕನಿಮೋಳಿ, ನಟ ಕಮಲ್‌ ಹಾಸನ್ ಗೂ ಆಹ್ವಾನ ಕೊಟ್ಟ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಚುನಾವಣಾ (Karnataka Election) ಪ್ರಚಾರಕ್ಕೆ ಈಗಾಗಲೇ ಎಲ್ಲೆಡೆ ಪ್ರಮುಖ ವ್ಯಕ್ತಿಗಳು ಆಗಮಿಸಿ ತಮ್ಮ ಅಭ್ಯರ್ಥಿ, ಪಕ್ಷ ಪರ ಬಿರುಸಿನ ಮತಯಾಚನೆ ಮಾಡುತ್ತಿದ್ದಾರೆ. ಇದರ ನಡುವೆ ತಮಿಳುನಾಡಿನ ಇಬ್ಬರು ನಾಯಕರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

ಡಿಎಂಕೆ ಸಂಸದೆ ಕನಿಮೋಳಿ (Kanimozhi) ಮತ್ತು ತಮಿಳು ಚಿತ್ರ ರಂಗದ ಸೂಪರ್ ಸ್ಟಾರ್ ಕಮಲ್‌ ಹಾಸನ್ (Kamal Haasan) ಅವರಿಗೆ ತಮಿಳು (Tamil) ಪ್ರಾಬಲ್ಯದ ಬೆಂಗಳೂರು, ಶಿವಮೊಗ್ಗ ಹಾಗೂ ಕೋಲಾರ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಇವರಿಗೆ ಆಹ್ವಾನ ನೀಡಿದ್ದಾರೆ.

ಈಗಾಗಲೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಈಗ ಕಾಂಗ್ರೆಸ್‌ ತಮಿಳುನಾಡು ನಾಯಕರ ಮೂಲಕ ಪ್ರಚಾರ ನಡೆಸಲು ಮುಂದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!