ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ವಿಶ್ವಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಕೆಆರ್‌ಎಸ್ ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ರಂಗನತಿಟ್ಟಿನಲ್ಲಿ ಬೋಟಿಂಗ್ ಪಾಯಿಂಟ್ ಮುಳುಗಡೆಯಾಗಿದೆ. ಈ ಕಾರಣದಿಂದ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಪಕ್ಷಿಗಳ ಆಶ್ರಯತಾಣ ನಡುಗಡ್ಡೆಗಳು ಕೂಡ ಭಾಗಶಃ ಜಲಾವೃತಗೊಂಡಿವೆ. ನೀರು ಮತ್ತಷ್ಟು ಹೆಚ್ಚಾದ್ರೆ ವಾಕಿಂಗ್ ಪಾಥ್​​ಗೂ ನೀರು ನುಗ್ಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ರಂಗನತಿಟ್ಟು ಸಿಬ್ಬಂದಿ ಗೇಟ್ ಬಳಿಯೇ ಪ್ರವಾಸಿಗರನ್ನು ತಡೆದು ವಾಪಸ್ ಕಳುಹಿಸುತ್ತಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!