ಚಿಕ್ಕಮಗಳೂರಿನಲ್ಲಿ ಗುಡ್ಡ ಕುಸಿತ: ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವೇಶ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿದಿದೆ. ಇದರಿಂದಾಗಿ ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ರಸ್ತೆ ತೆರವು ಕಾರ್ಯ ಹಿನ್ನೆಲೆ ಜು.28ರವರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನಹಳ್ಳ, ಕೆಮ್ಮಣ್ಣುಗುಂಡಿ, ಸೀತಾಳಯ್ಯನಗಿರಿ ಪ್ರವೇಶಕ್ಕೆ ಪ್ರವಾಸಿಗರಿಗೆ ಅನುಮತಿ ಇರುವುದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here