ಈ ಎರಡು ದಿನ ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ, ಮತದಾನ ಪ್ರಮಾಣ ಹೆಚ್ಚಳಕ್ಕೆ ಕ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇದೇ ತಿಂಗಳ 25  ಹಾಗೂ 26 ರಂದು ಬೆಂಗಳೂರಿಗರ ಪ್ರವಾಸಿ ತಾಣ ನಂದಿಬೆಟ್ಟದಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ.

ಲೋಕಸಭಾ ಚುನಾವಣಾ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಎರಡು ದಿನ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ದಿನಗಳಲ್ಲಿ ನಂದಿ ಗಿರಿಧಾಮದಲ್ಲಿರುವ ಅತಿಥಿ ಗೃಹಗಳಿಗೂ ಬೀಗ ಹಾಕಲಾಗುವುದು ಎಂದು ಹೇಳಲಾಗಿದೆ.

ಏಪ್ರಿಲ್ 26 ಶುಕ್ರವಾರ. ಲೋಕಸಭೆ ಚುನಾವಣೆ ಪ್ರಯುಕ್ತ ಅಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಖಾಸಗಿ ಕಂಪನಿಗಳೂ ಸಹ ರಜೆ ನೀಡುವುದು ಕಡ್ಡಾಯ ಎಂದು ಚುನಾವಣಾ ಆಯೋಗ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮರುದಿನ ಶನಿವಾರ ಹಾಗೂ ಅದರ ಮರುದಿನ ಭಾನುವಾರ ಆದ್ದರಿಂದ ಸತತ ಮೂರು ದಿನ ರಜೆ ಎಂದು ಜನ ಪ್ರವಾಸಕ್ಕೆ ಯೋಜನೆ ಮಾಡಿದರೆ ಮತದಾನದ ಪ್ರಮಾಣ ಕಡಿಮೆಯಾಗಲಿದೆ. ಈ ಕಾರಣದಿಂದಾಗಿ ನಂದಿ ಬೆಟ್ಟದಲ್ಲಿ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!