ಪ್ರವಾಸಿಗರೇ ಗಮನಿಸಿ: ಕೊಡಚಾದ್ರಿ ಬೆಟ್ಟಕ್ಕೆ ಇಂದಿನಿಂದ ಪ್ರವೇಶ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದ ಪ್ರಸಿದ್ಧ ಪ್ರವಾಸಿ ಸ್ಥಳವಾದ ಕೊಡಚಾದ್ರಿ ಬೆಟ್ಟಕ್ಕೆ ಇಂದಿನಿಂದ (ಜುಲೈ 30) ಮುಂದಿನ ಆದೇಶದವರೆಗೆ ವಾಹನದಲ್ಲಿ ತೆರಳುವುದು ಹಾಗೂ ಚಾರಣ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಹಿನ್ನೆಲೆ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವನ್ಯಜೀವಿ ವಿಭಾಗ ಆದೇಶದಲ್ಲಿ ತಿಳಿಸಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರವಾಸಿ ತಾಣ ಕೊಡಚಾದ್ರಿಗೆ ಕಟ್ಟಿನಹೊಳೆ ಮೂಲಕ ತೆರಳುವ ವಾಹನ ಹಾಗೂ ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈ ಮೂಲಕ ನಿಟ್ಟೂರು, ಸಂಪೆಕಟ್ಟೆ, ಕಟ್ಟಿನಹೊಳೆಯಿಂದ ಪ್ರತಿ ನಿತ್ಯ ಕೊಡಚಾದ್ರಿಗೆ ಜೀಪ್‌ನಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸುಮಾರು 150 ಜೀಪ್‌ ಮಾಲೀಕರು, ಚಾಲಕರ ಜೀವನ ನಿರ್ವಹಣೆಗೆ ಹೊಡೆತ ಬಿದ್ದಂತಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!