Saturday, October 11, 2025

ಪ್ರಾದೇಶಿಕ, ವಲಯ ಕಚೇರಿಗಳಿಗೆ ಬರಲಿದೆ ಪರಿಸರ ಸ್ನೇಹಿ ವಾಹನ: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 68 ವಾಹನಗಳ ಖರೀದಿ


ಹೊಸದಿಗಂತ ಡಿಜಿಟಲ್ ಡೆಸ್ಕ್:


ಪರಿಸರ ಕಾಳಜಿಗೆ ಸರಕಾರ ಒಟ್ಟು ನೀಡಿದ್ದು, ಇದರ ಭಾಗವಾಗಿ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರಸ್ನೇಹಿ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಒಟ್ಟು 68 ವಾಹನಗಳನ್ನು ಖರೀದಿಸಿದ್ದು, ಈ ವಾಹನಗಳನ್ನು ರಾಜ್ಯದಲ್ಲಿರುವ ಪ್ರಾದೇಶಿಕ ಕಚೇರಿ ಮತ್ತು ವಲಯ ಕಚೇರಿಗಳಿಗೆ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ. 68 ವಾಹನ ಖರೀದಿಯ ವೆಚ್ಚವು 7 ಕೋಟಿ 67 ಲಕ್ಷ ರೂಪಾಯಿ ಆಗಿದೆ.

error: Content is protected !!