ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಚ್ಚಿನ ಪಿಂಚಣಿಗಾಗಿ ಅರ್ಜಿ ಸಲ್ಲಿಸಲು ನೀಡಿದ್ದ ಕಾಲವಕಾಶವನ್ನು EPFO (ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ) ಜುಲೈ 11ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ EPFO ಮೂರನೇ ಬಾರಿ ಗಡುವನ್ನು ವಿಸ್ತರಿಸಿದಂತಾಗಿದೆ.
ಇಪಿಎಫ್ಒ ಹೊರಡಿಸಿದ ಪ್ರಕಟಣೆಯ ಪ್ರಕಾರ ಇಪಿಎಫ್ ಸದಸ್ಯರು ಹೆಚ್ಚುವರಿ ಪಿಂಚಣಿಗಾಗಿ ಅರ್ಜಿ ಸಲ್ಲಿಸಲು ಜೂನ್ 26ಕ್ಕೆ ಕೊನೆಯ ದಿನವಾಗಿತ್ತು. ಆದರೆ ಪಿಂಚಣಿದಾರರಿಗೆ ಸಿಹಿ ಸುದ್ದಿ ನೀಡಿರುವ ಸರ್ಕಾರ, ಇದೀಗ ಮೂರನೇ ಬಾರಿಗೆ ಗಡುವು ವಿಸ್ತರಣೆ ಮಾಡಿದೆ. ಹೀಗಾಗಿ ಪಿಂಚಣಿದಾರರಿಗೆ ಜುಲೈ 11ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕಿದೆ.
ಬಹಳ ಉದ್ಯೋಗಿಗಳಿಗೆ ಆನ್ಲೈನ್ನಲ್ಲಿ ಹೆಚ್ಚುವರಿ ಪೆನ್ಷನ್ಗೆ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆ ಎದುರಾಗಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಮೂರನೇ ಬಾರಿ ಗಡುವನ್ನು ವಿಸ್ತರಣೆ ಮಾಡಲಾಗಿದೆ. ಇದೀಗ ಜು.11ರೊಳಗೆ ಅಧಿಕ ಪಿಂಚಣಿಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.