ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಕನಸಾಗಿಯೇ ಉಳಿದಿದೆ: ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖಾತರಿ ಯೋಜನೆಗಳ ಸವಲತ್ತುಗಳು ರಾಜ್ಯದ 4 ಕೋಟಿ 60 ಲಕ್ಷ ಫಲಾನುಭವಿಗಳಿಗೆ ತಲುಪುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಾಮರಾಜನಗರ ಜಿಲ್ಲೆಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಐದು ಗ್ಯಾರಂಟಿ ಯೋಜನೆಗಳನ್ನು ಪ್ರತಿನಿಧಿಸುವ ಸಿರಿಧಾನ್ಯಗಳ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಅಸಮಾನತೆ ಇನ್ನೂ ಇದೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಕನಸಾಗಿಯೇ ಉಳಿದಿದೆ ಎಂದರು.

ದೇಶದಲ್ಲಿನ ಜಾತಿ ವ್ಯವಸ್ಥೆಯೇ ಅಸಮಾನತೆಗೆ ಕಾರಣ. ಅಧಿಕಾರ ಮತ್ತು ಸಂಪತ್ತು ಕೆಲವೇ ಜನರಿಗೆ ಸಿಕ್ಕಿದೆ. ಆದರೆ ಈ ಅಧಿಕಾರ ಎಲ್ಲಾ ವರ್ಗದವರಿಗೂ ಸಮಾನವಾಗಿ ಹಂಚಿಕೆ ಮಾಡುವುದು ಸರ್ಕಾರದ ಕೆಲಸ. ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!