ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ , ಬರೋಬ್ಬರಿ 6.30 ಕೋಟಿ ಮೌಲ್ಯದ ಡ್ರಗ್ಸ್ ನ್ನು ವಶಪಡಿಸಿಕೊಂಡಿದ್ದಾರೆ.
ಹೊಸವರ್ಷಾಚರಣೆ ಹಿನ್ನೆಲೆ ಬೆಂಗಳೂರಿಗೆ ಡ್ರಗ್ಸ್ ಸಪ್ಲ್ಗೈ ಆಗುತಿತ್ತು ಎನ್ನಲಾದ ಮಾಹಿತಿಯನ್ನು ಆದರಿಸಿ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಭಾರೀ ಮೊತ್ತದ ಡ್ರಗ್ಸ್ ಸೀಜ್ ಮಾಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.