ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯೋದಿಲ್ಲ: ಬಿ.ವೈ. ವಿಜಯೇಂದ್ರ

ಹೊಸದಿಗಂತ ವರದಿ ಕಲಬುರಗಿ:

ಕಲಬುರಗಿ-ಬೀದರ್ ಅಥವಾ ರಾಜ್ಯದ ಯಾವುದೇ ಕ್ಷೇತ್ರವಿರಲಿ, ಅಭ್ಯರ್ಥಿಗಳನ್ನು ಅಂತಿಮವಾಗಿ ತೀರ್ಮಾನ ಮಾಡಿದ್ದು, ಬಿಜೆಪಿ ಹೈಕಮಾಂಡ್. ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ಕಣಕ್ಕಿಳಿಯೋದಿಲ್ಲ. ವಾಸ್ತವಿಕತೆ ಅರ್ಥ ಮಾಡಿಕೊಂಡ ನಿರ್ಧಾರ ವಾಪಸ್ ಪಡೆಯಲಿದ್ದಾರೆ
ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಶನಿವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಲಬುರಗಿ ನಗರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ, ಕಲಬುರಗಿ, ಬೀದರ್ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದು, ಮಧ್ಯಾಹ್ನ ಎರಡು ಗಂಟೆಗೆ ಮೋದಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿವ ವಿಚಾರವಾಗಿ ಮಾತನಾಡಿದ ಅವರು, ಭಗವಂತ ಅವರಿಗೆ ಒಳ್ಳೆಯದು ಮಾಡಲಿ ಎಂದು ಹಾರೈಸುತ್ತೇನೆ. ನಮ್ಮ ಹಿರಿಯರು ಅದರ ಬಗ್ಗೆ ಗಮನಿಸುತ್ತಾರೆ. ನನಗೆ ವಿಶ್ವಾಸವಿದೆ, ಈಶ್ವರಪ್ಪ ವಾಸ್ತವಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ತಮ್ಮ ನಿರ್ಧಾರ ವಾಪಸ್ ಪಡೆಯಲಿದ್ದಾರೆ ಎಂದು ಹೇಳಿದರು.

ಈಗಲೂ ಸಹ ನಮ್ಮ ನಾಯಕರು ಅವರೊಂದಿಗೆ ಮಾತುಕತೆ ನಡೆಸಿದ್ದು,ಮನವೊಲಿಸುವ ಪ್ರಯತ್ನ ನಡೆಸಿದೆ.ಈಶ್ವರಪ್ಪ ಅವರು ಪಕ್ಷದ ವಿರುದ್ಧ ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!