ಬಿಜೆಪಿ‌ ಪ್ರಣಾಳಿಕೆ ಬಿಡುಗಡೆ ಬೆನ್ನಲೇ ‘ಈಶ್ವರಪ್ಪ’ ಪ್ರಣಾಳಿಕೆ ಘೋಷಣೆ: ಏನಿದೆ ಈ ಪ್ರಣಾಳಿಕೆಯಲ್ಲಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಸಾರ್ವತ್ರಿಕ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯ ದಿನವೇ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಕೂಡ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಪ್ರಣಾಳಿಕೆ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಈಶ್ವರಪ್ಪ, ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಘೋಷಿಸುವ ಮೂಲಕ ಬಿ.ಎಸ್‌.ಯಡಿಯೂರಪ್ಪ ಕುಟುಂಬಕ್ಕೆ ಈಶ್ವರಪ್ಪ ಟಾಂಗ್ ನೀಡಿದ್ದಾರೆ.

ಭಾರತೀಯ ಜನತಾ ಪಕ್ಷದ ಅಧ್ಯಕ್ಷ ವಿಜಯೇಂದ್ರ, ದಯವಿಟ್ಟು ಮಾನಹಾನಿ ಹರಡುವುದನ್ನು ಮತ್ತು ದೇಶಭಕ್ತರಲ್ಲಿ ಗೊಂದಲ ಸೃಷ್ಟಿಸುವುದನ್ನು ನಿಲ್ಲಿಸಿ. ಪ್ರಧಾನಿ ಮೋದಿ, ಅಮಿತ್ ಶಾ ಅಥವಾ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!