ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ಕಾಲದಲ್ಲಿ ಬಿಜೆಪಿ (BJP) ಗೆ ಶಕ್ತಿ ಇಲ್ಲದಾಗ ಸಂಘಟನೆ ಮಾಡಿದವರಲ್ಲಿ ಈಶ್ವರಪ್ಪ ಪ್ರಮುಖರು, ಅವರ ತೀರ್ಮಾನ ಅವರ ಪಕ್ಷದ ಬೆಳವಣಿಗೆ ಬಗ್ಗೆ ಟೀಕೆ ಮಾಡೋದು ಶೋಭೆ ತರುವಂತದ್ದಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರದ್ದೇ ಆದ ರೀತಿಯಲ್ಲಿ ಪಕ್ಷ ಸಂಘಟನೆ ಮಾಡಿದವರು, ಅವರು ಇನ್ನೂ ಸ್ವಲ್ಪ ದಿನ ರಾಜಕಾರಣದಲ್ಲಿ ಇರಬೇಕಿತ್ತು. ನನ್ನ ಸರ್ಕಾರದಲ್ಲಿ ನೀರಾವರಿ ಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು.
ಜೆಡಿಎಸ್ (JDS) ಎರಡನೇ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೀವಿ ಎಂದ ಕುಮಾರಸ್ವಾಮಿ, ಭವಾನಿ ರೇವಣ್ಣರಿಗೆ ಟಿಕೆಟ್ ವಿಚಾರವಾಗಿ ಮಾಧ್ಯಮದವರ ಕನ್ನಡ ಪದಬಳಕೆ ಅರ್ಥವಾಗುವಂತೆ ಈಗಾಗಲೇ ಹೇಳಿದ್ದೇನೆ. ನಾವು ಇಂತದ್ದೇ ವ್ಯಕ್ತಿಯನ್ನ ಸೋಲಿಸುವ ಹಾಗಿಲ್ಲ. ಕಾರ್ಯಕರ್ತರೇ ಸೋಲಿಸುತ್ತಾರೆ ಅಂತ ಹೇಳಿದ್ದೆ ಎಂದರು.