RECRUITMENT | ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ 21 ಹುದ್ದೆಗಳಿಗೆ ನೇರಸಂದರ್ಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕಾರ್ಮಿಕರ ರಾಜ್ಯ ವಿಮಾ ನಿಗಮ, ಕರ್ನಾಟಕದಲ್ಲಿ 21 ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸೀನಿಯರ್‌ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 20,25,2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸೀನಿಯರ್‌ ರೆಸಿಡೆಂಟ್‌ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಡಿಎನ್‌ಬಿ, ಎಂಡಿ, ಎಂಎಸ್‌ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ಈ ಹುದ್ದೆಗಳಿಗೆ ಗರಿಷ್ಟ 67 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸೀನಿಯರ್‌ ರೆಸಿಡೆಂಟ್ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67‌,700/- ರಿಂದ 2,22,543/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಫೆಬ್ರವರಿ 20,2023ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!