Sunday, February 5, 2023

Latest Posts

ಈ.ಎಸ್.ಐ.ಸಿ. ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ: ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ ನಾಗಾಭರಣ

ಹೊಸದಿಗಂತ ವರದಿ,ದೆಹಲಿ:

ಕಾರ್ಮಿಕರ ರಾಜ್ಯ ವಿಮಾ ನಿಗಮದ ಕೆಳಹಂತದ ಹುದ್ದೆಗಳಿಗೆ ಕರ್ನಾಟಕ ದಲ್ಲಿ ಹಿಂದಿ ಜತೆಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವಂತೆ ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿಯವರಿಗೆ ಕನ್ನಡ ಪ್ರಾಧಿಕಾರದ ಅಧ್ಯಕ್ಷ ಶ್ರೀ ಟಿ. ಎಸ್. ನಾಗಾಭರಣ ಅವರು ವಿನಂತಿಸಿದ್ದರು. ನಾಗಾಭರಣ ಅವರ ವಿನಂತಿ ಹಾಗೂ ಕರ್ನಾಟಕದ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಸಚಿವ ಜೋಶಿಯವರು
ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೂಪೇಂದ್ರ ಯಾದವ ಅವರೊಂದಿಗೆ ಚರ್ಚಿಸಿ ಒತ್ತಾಯಿಸಿದ್ದರ ಫಲವಾಗಿ
ನಿಗಮವು ತಿದ್ದುಪಡಿ ಅಧಿಸೂಚನೆ ಹೊರಡಿಸಿ, ಕಾರ್ಮಿಕರ ರಾಜ್ಯ ವಿಮಾ ನಿಗಮದ ಕೆಳಹಂತದ ಹುದ್ದೆಗಳಿಗೆ ಕರ್ನಾಟಕದಲ್ಲಿ ಹಿಂದಿ ಜತೆಗೆ ಕನ್ನಡ ದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. . ಇದರಿಂದ ಎಂಟಿಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆಯಲ್ಲಿ ಭಾಷಾ ಮಾಧ್ಯಮದಲ್ಲಿ ಬದಲಾವಣೆ ಮಾಡಿ ಆಯಾ ವಲಯಗಳಲ್ಲಿ ಹಿಂದಿ ಜತೆಗೆ ಇತರ ಪ್ರಾದೇಶಿಕ ಭಾಷೆಗಳಿಗೂ ಅವಕಾಶ ನೀಡಲಾಗಿದೆ.
ಈ ಅಧಿಸೂಚನೆ ಹೊರಡಿಸಲು ಕಾರಣರಾದ ಶ್ರೀ ಪ್ರಹ್ಲಾದ ಜೋಶಿಯವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಟಿ.ಎಸ್. ನಾಗಾಭರಣ ಅವರು ಅಭಿನಂಧಿಸಿ ಪತ್ರ ಬರೆದಿದ್ದಾರೆ.
ಕೇಂದ್ರ ಸರ್ಕಾರಿ ಸ್ವಾಮ್ಯದ ವಿವಿಧ ಇಲಾಖೆಗಳ ಎಂ.ಟಿ.ಎಸ್. (ಗ್ರುಪ್ ಸಿ) ಹುದ್ದೆಗಳ ನೇಮಕಾತಿಗಾಗಿ ನಡೆಸುವ ಪರೀಕ್ಷೆಯನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಿರುವುದು ಕನ್ನಡಿಗರ ಅಸ್ಮಿತೆಗೆ ದೊರಕಿದ ಜಯ. ಪ್ರಾಧಿಕಾರದ ಒತ್ತಾಸೆಗೆ ಸ್ಪಂದಿಸಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ತಮಗೆ ಅಖಂಡ ಕನ್ನಡ ಮನಸ್ಸುಗಳ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ. ಕನ್ನಡ ಭಾಷೆ ಬಳಕೆ ಮತ್ತು ಅನುಷ್ಠನದ ವಿಷಯದಲ್ಲಿ ತಮ್ಮ ಸಹಕಾರ ಪ್ರಾಧಿಕಾರಕ್ಕೆ ಹೀಗೆ ದೊರಕಲೆಂದು ಆಶಿಸುತ್ತೇನೆ ಎಂದು ತಮ್ಮ ಅಭಿನಂದನಾ ಪಾತ್ರದಲ್ಲಿ ತಿಳಿಸಿದ್ದಾರೆ.
ಇದರೊಂದಿಗೆ ಪ್ರಾಧಿಕಾರದ ಪತ್ರವನ್ನು ಕಳುಹಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!