ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ 57 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಡೆಂಟಲ್ ಮೆಕ್ಯಾನಿಕ್, ಜ್ಯೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಡಿಪ್ಲೋಮಾ, ಪದವಿ, 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 92,300/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಕ್ಟೋಬರ್ 30,2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.